ಬಳ್ಳಾರಿ:
ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಅ.2 ರಂದು ಬೆಳಗ್ಗೆ 9.30 ಕ್ಕೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ನಡೆಯಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ನಿರ್ದೇಶಕರಾದ ರಾಮಲಿಂಗಪ್ಪ.ಬಿ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಕರಾಗಿ ಆಗಮಿಸಲಿದ್ದಾರೆ. ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಅಧ್ಯಕ್ಷತೆ ಹಾಗೂ ಮಹಾತ್ಮ ಗಾಂಧೀಜಿಯವರ ಅಪರೂಪದ ಛಾಯಾಚಿತ್ರಗಳ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.
ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಲೋಕಸಭಾ ಸದಸ್ಯ ಕರಡಿ ಸಂಗಣ್ಣ, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರುಗಳಾದ ಪಿ.ಟಿ.ಪರಮೇಶ್ವರ ನಾಯ್ಕ, ಆನಂದ ಸಿಂಗ್, ಈ.ತುಕಾರಾಂ, ಬಿ.ನಾಗೇಂದ್ರ, ಎನ್.ವೈ.ಗೋಪಾಲಕೃಷ್ಣ, ಭೀಮಾನಾಯ್ಕ ಎಲ್.ಬಿ.ಪಿ, ಎಂ.ಎಸ್.ಸೋಮಲಿಂಗಪ್ಪ, ಜೆ.ಎನ್.ಗಣೇಶ್ ಹಾಗೂ ವಿಧಾನಪರಿಷತ್ ಸದಸ್ಯರಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಬಿ.ಪಾಟೀಲ, ಮಹಾನಗರಪಾಲಿಕೆಯ ಮಹಾಪೌರರಾದ ಆರ್.ಸುಶೀಲಬಾಯಿ , ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಮೋಕಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಹೊನ್ನೂರ್ ಅಲಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ .ಮಹಾತ್ಮಾಗಾಂಧೀಜಿ ಅವರ ಜೀವನ ಮತ್ತು ಸಾಧನೆ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ. ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಗಾಂಧೀಜಿ ಅವರ ಜೀವನಕ್ಕೆ ಸಂಬಂಧಿಸಿದ ವಿಶೇಷಾಂಕಗಳನ್ನು ಬಿಡುಗಡೆ ಮಾಡಲಾಗುತ್ತದೆ . ಕೆ.ದೊಡ್ಡಬಪ್ಪ ಮತ್ತು ಸಂಗಡಿಗರಿಂದ ಗಾಂಧೀ ಪ್ರಿಯ ಭಜನ್ ಹಾಗೂ ಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ