ಮೈಸೂರು;
ಆಪರೇಷನ್ ಕಮಲದಲ್ಲಿ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರು ಸಕ್ರಿಯರಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾಧು ಆರೋಪಿಸಿದರು.
ಮೈಸೂರಿನಲ್ಲಿ ಇಂದು ಮಾತನಾಡುತ್ತಿದ್ದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನನ್ನನ್ನು ಒತ್ತಾಯಿಸಿ, ಮುಂದೆ ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿ, ಉಪಚುನಾವಣೆಯ ವ್ಯಚ್ಚವನ್ನು ಭರಿಸುವುದಾಗಿ ತಿಳಿಸಿರುವ ಅವರು, ಸಚಿವ ಸ್ಥಾನ ನೀಡುವುದಾಗಿ ಆಮಿಷವೊಡ್ಡಿದರು ದೂರಿದರು. ನಾನು ಕಷ್ಟದಲ್ಲಿರುವಾಗ ನನ್ನನ್ನು ಗುರುತಿಸಿ ಅವಕಾಶ ನೀಡಿರುವುದು ಕಾಂಗ್ರೆಸ್ ಪಕ್ಷ ಹೀಗಿರುವಾಗ ನಾನು ಪಕ್ಷ ಬಿಡುವುದಾದರು ಹೇಗೆ ಎಂದು ಪ್ರಶ್ನಿಸಿದ ಅವರು, ಹೀಗಾಗಿ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.