ಬೆಂಗಳೂರು
ನನ್ನ ಮೇಲಿನ ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಆರೋಪ ಸಾಬೀತು ಮಾಡಲಿ. ಇವರದ್ದನ್ನು ಬಿಚ್ಚೋ ಕಾಲ ಬರುತ್ತದೆ ಬಿಚ್ಚುತ್ತೇನೆ. ನನ್ನ ಮೇಲಿನ ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಗುಡುಗಿದರು.
ನೂರು ದಿನದಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮೊದಲ ಕ್ಯಾಬಿನೆಟ್ನಲ್ಲೇ ಎಲ್ಲಾ ಗ್ಯಾರಂಟಿ ಇತ್ಯರ್ಥ ಮಾಡಿದ್ದೇವೆ. ಬಿಜೆಪಿಯವರದ್ದು ಭರವಸೆ, ನಮ್ಮದು ಗ್ಯಾರಂಟಿ. ಇಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತಿದ್ದು, ನಾಡಿನೆಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲರ ಮನೆಗಳಲ್ಲಿ ಹೆಣ್ಣು ಮಕ್ಕಳು ಹಬ್ಬದ ಸಂಭ್ರಮದಲ್ಲಿದ್ದಾರೆ. 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ, ಸಿಎಂ ಸಿದ್ದರಾಮಯ್ಯ, ನಾನು ಚೆಕ್ಗೆ ಸಹಿ ಹಾಕಿದ್ದು, ಯಜಮಾನಿಯರ ಬ್ಯಾಂಕ್ ಖಾತೆಗೆ 2000 ರೂಪಾಯಿ ಹಣ ಜಮೆಯಾಗುತ್ತದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ