ಬೆಂಗಳೂರು:
ಈಗಿನಿಂದಲೇ 2019ರ ಐಪಿಎಲ್ ಟೂರ್ನಿಗೆ ಭರ್ಜರಿ ಸಿದ್ಧತೆ ನಡೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಟೀಂ ಇಂಡಿಯಾ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ಅವರನ್ನು ತನ್ನ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ.ಕಳೆದ ಐಪಿಎಲ್ ಸೀಸನ್ನಲ್ಲಿ ಆರ್ಸಿಬಿ 14 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳಲ್ಲಿ ಮಾತ್ರ ಗೆಲುವು ದಾಖಲಿಸಿತು. ಹೀಗಾಗಿ ಸಪೋರ್ಟಿಂಗ್ ಸ್ಟಾಫ್ನಲ್ಲಿ ಚೇಂಜಸ್ ಮಾಡಲು ಹೊರಟಿದ್ದು, ಆರ್ಸಿಬಿ ಫ್ರಾಂಚೈಸಿ, ತಂಡದ ಮುಖ್ಯ ಕೋಚ್ ಆಗಿದ್ದ ಡೇನಿಯಲ್ ವೆಟ್ಟೋರಿ ಅವರನ್ನು ಇತ್ತೀಚಿಗೆ ವಜಾಗೊಳಿಸಿತ್ತು. ಇದೀಗ ಅವರ ಸ್ಥಾನಕ್ಕೆ ಗ್ಯಾರಿ ಅವರನ್ನು ನೇಮಕ ಮಾಡಿದೆ.ಈ ಹಿಂದೆ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಕೋಚ್ ಆಗಿ ಕೆಲಸ ಮಾಡಿದ್ದ ಗ್ಯಾರಿ ಅವರು 2011ರ ವಿಶ್ವಕಪ್ ವೇಳೆ ಭಾರತ ತಂಡಕ್ಕೆ ಮಾರ್ಗದರ್ಶನ ಮಾಡಿದ್ದರು.ದಕ್ಷಿಣ ಆಫ್ರಿಕಾ ಮಾಜಿ ಆಟಗಾರ ಗ್ಯಾರಿ ಅವರು 2018ರಲ್ಲಿ ಆರ್ ಸಿಬಿ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಂಡಿದ್ದರು.ತಮ್ಮನ್ನು ಮುಖ್ಯ ಕೋಚ್ ಆಗಿ ಆಯ್ಕೆ ಮಾಡಿದ ಆರ್ ಸಿಬಿ ಫ್ರಾಂಚೈಸಿಗೆ ಧನ್ಯವಾದ ಹೇಳಿದ ಗ್ಯಾರಿ, ಕಳೆದ ಆವೃತ್ತಿಯಲ್ಲಿ ಮುಖ್ಯ ಕೋಚ್ ವೆಟ್ಟೋರಿ ಕೈಕೆಳಗೆ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು ಮತ್ತು ಆ ಅನುಭವವನ್ನು ಸಂಪೂರ್ಣವಾಗಿ ಆನಂದಿಸಿದ್ದೇನೆ ಎಂದಿದ್ದಾರೆ.