ಹೈದರಾಬಾದ್
86 ವರ್ಷದ ಹೈದರಾಬಾದ್‌ನ ಕೈಗಾರಿಕೋದ್ಯಮಿ ವೆಲಮತಿ ಚಂದ್ರಶೇಖರ ಜನಾರ್ದನ ರಾವ್ ಅವರನ್ನು ಆಸ್ತಿ ಹಂಚಿಕೆಗೆ ಸಂಬಂಧಿಸಿದಂತೆ ಅವರ ಮೊಮ್ಮಗನೇ 70 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ.
ಜನಾರ್ದನ ರಾವ್ ಅವರ ನಿವಾಸದಲ್ಲಿಯೇ ಅವರನ್ನು ಹತ್ಯೆ ಮಾಡಲಾಗಿದೆ. ಆಸ್ತಿ ಹಂಚಿಕೆಗೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು 29 ವರ್ಷದ ಮೊಮ್ಮಗ ಕಿಲಾರು ಕೀರ್ತಿ ತೇಜ ಎಂದು ಗುರುತಿಸಲಾಗಿದ್ದು, ವೆಲ್ಜನ್ ಗ್ರೂಪ್‌ನ ಅಧ್ಯಕ್ಷ ವೆಲಮತಿ ಚಂದ್ರಶೇಖರ ಜನಾರ್ದನ ರಾವ್ ಅವರನ್ನು ಚಾಕುವಿನಿಂದ 70 ಬಾರಿ ಇರಿದು ಅವರನ್ನು ಕೊಲೆ ಮಾಡಿದ್ದಾನೆ.
ತೇಜ ಅಮೆರಿಕದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿ ಇತ್ತೀಚೆಗೆ ಹೈದರಾಬಾದ್‌ಗೆ ಮರಳಿದ್ದ. ತಮ್ಮ ತಾಯಿಯೊಂದಿಗೆ ರಾವ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ಆಸ್ತಿ ವಿವಾದಕ್ಕೆ ಜಗಳ ನಡೆದಿದೆ. ಈಗಾಗಲೇ ರಾವ್ ಅವರ ಆಸ್ತಿಯಲ್ಲಿ ತೇಜ್‌ಗೆ 4 ಕೋಟಿ ರೂ.ಗಳನ್ನು ನೀಡಲಾಗಿತ್ತು. ಆದರೂ ಆತ ಆಸ್ತಿ ವಿವಾದಕ್ಕೆ ಜಗಳವಾಡಿದ್ದಾನೆ. ಚಾಕವಿನಿಂದ ಇರಿಯುವಾಗ ಜಳ ತಾಯಿ ಸರೋಜಿನಿ ದೇವಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದ್ದರು. ಆದರೆ ಆಕೆಗೂ ಇರಿಯಲು ಪ್ರಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ತೇಜನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಜನಾರ್ದನ ರಾವ್ ಅವರು ಪ್ರಸಿದ್ಧ ಕೈಗಾರಿಕೋದ್ಯಮಿ ಮತ್ತು ಲೋಕೋಪಕಾರಿಯಾಗಿದ್ದು, ಹಡಗು ನಿರ್ಮಾಣ, ಇಂಧನ ಮತ್ತು ಕೈಗಾರಿಕಾ ಅನ್ವಯಿಕೆಗಳು ಸೇರಿದಂತೆ ಬಹು ವಲಯಗಳಿಗೆ ಕೊಡುಗೆಗಳನ್ನು ನೀಡಿದ್ದಾರೆ.ಕಳೆದ ತಿಂಗಳು ಮಹಿಳೆಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಕೊಲೆಯ ಬಳಿಕ ಆತ ತಾನೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೀಡಾದ ಮಹಿಳೆಯನ್ನು ಮೌಸುಮಿ ಗೊಗೊಯ್ ಎಂದು ಗುರುತಿಸಲಾಗಿದೆ. ಚಾಕು ಇರಿದ ಆರೋಪಿಯನ್ನು ಭೂಪೇನ್ ದಾಸ್ ಎಂದು ಗುರುತಿಸಲಾಗಿದೆ. ಲೇಟ್ ಗೇಟ್ ಪ್ರದೇಶದ ಮಹಿಳೆಯ ನಿವಾಸದ ಹೊರಗೆ ಕೊಲೆ ನಡೆದಿದ್ದು, ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
