ಮಿಡಿಗೇಶಿ
ಆ.15 ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ರೆಡ್ಡಿಹಳ್ಳಿ ಗ್ರಾಮ ಪಂಚಾಯ್ತಿಗೆ ಸೇರಿದ ರಾಜ್ಯದ ಗಡಿ ಗ್ರಾಮವಾದ ಮಲ್ಲನಾಯ್ಕನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 100 ಜನ ವಿದ್ಯಾರ್ಥಿ, ವಿದ್ಯಾರ್ಥಿನಿಯರುಗಳವರಿಗೆ ಮಿಡಿಗೇಶಿ ಗ್ರಾಮದ ದಿವಂಗತ ಪುಟ್ಟಬಸಪ್ಪನವರ ಹತ್ತನೇ ವರ್ಷದ ಜ್ಞಾಪಕಾರ್ಥವಾಗಿ ಸೊಸೆ ವಿಜಯಲಕ್ಷ್ಮಿ-ಹರೀಶ್ ರವರು ಆ.15 ರಂದು 72ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯ ಕಾರ್ಯಕ್ರಮದಲ್ಲಿ ಉಚಿತವಾಗಿ ತಟ್ಟೆ ಲೋಟಗಳನ್ನು ವಿತರಿಸಲಾಯಿತು. ಉದೇ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಗಣ್ಯರು ಹಾಗೂ ಅಧ್ಯಾಪಕ ವೃಂದದವರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ