ಬೆಂಗಳೂರು:
ಕರಾವಳಿ, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಸೆ.20-22ರವರೆಗೆ ಭಾರಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದಲ್ಲಿ ಇನ್ನು ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಇಂದು(ಗುರುವಾರ) ಆಂಧ್ರಪ್ರದೇಶ, ಒಡಿಶಾಗಳಲ್ಲಿ ಕುಂಭದ್ರೋಣ ಮಳೆ ಬೀಳುವ ಸಾಧ್ಯತೆ ಇದೆ ಅದರಿಂದ ಕರ್ನಾಟಕದಲ್ಲೂ ಮತ್ತೆ ಮುಂಗಾರು ಚುರುಕಾಗಲಿದೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ, ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೆಂಗಳೂರು ನಗರ, ಬೆಂ, ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ,ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ 6.4 ಸೆಂ.ಮೀನಿಂದ 11.5 ಸೆಂ.ಮೀನಷ್ಟು ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
