ಕುಣಿಗಲ್
ಐತಿಹಾಸಿಕ ಸುಪ್ರಸಿದ್ಧ ಶ್ರೀ ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಜಾತ್ರಾ ಕಾರ್ಯಕ್ರಮಗಳು ನಡೆಯುತ್ತಿದ್ದು, ಇಂದು ಏಪ್ರಿಲ್ 12ರಂದು ಅಭಿಜಿನ್ ಮುಹೂರ್ತದಲ್ಲಿ ಮಧ್ಯಾಹ್ನ 12 ಗಂಟೆಗೆ ಶ್ರೀ ಸಿದ್ಧಲಿಂಗೇಶ್ವರಸ್ವಾಮಿಯವರ ಮಹಾರಥೋತ್ಸವ ಅದ್ದೂರಿಯಾಗಿ ಜರುಗಲಿದೆ.
ಅದೇ ದಿನ ರಾತ್ರಿ 10 ಗಂಟೆಗೆ ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಏ.13 ರಂದು ರಾತ್ರಿ 10 ಗಂಟೆಗೆ ಬಿಲ್ವವಾಹನೋತ್ಸವ, ಏ.14 ರಂದು ರಾತ್ರಿ 10 ಗಂಟೆಗೆ ಬೆಳ್ಳಿಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿದೆ. ಜಾತ್ರೆ ನಡೆಯುವ 15 ದಿನಗಳು ಸಹ ಪ್ರತಿ ಸಂಜೆ ಸನ್ನಿಧಿಯಲ್ಲಿ ವಿವಿಧ ಉತ್ಸವಗಳು, ವಿಶೇಷ ಪೂಜಾ ಕಾರ್ಯಕ್ರಮಗಳು ಇರುತ್ತವೆ.
ಶ್ರೀ ಸಿದ್ಧಲಿಂಗೇಶ್ವರರ ಭಕ್ತಗಣ ಇಡಿ ರಾಜ್ಯ ದೇಶದಾದ್ಯಂತ ಪಸರಿಸಿದ್ದು, ಈ ಜಾತ್ರೆಯಲ್ಲಿ ವಿಶೇಷವಾಗಿ ಸಾವಿರಾರು ಭಕ್ತರು ತಮ್ಮ ಶಕ್ತಾನುಸಾರ ರಥೋತ್ಸವದಂದು ಉಚಿತವಾಗಿ ಮಜ್ಜಿಗೆ, ಪಾನಕ, ಕೋಸಂಬರಿಯನ್ನು ನೀಡುವ ಮೂಲಕ ಬೇಸಿಗೆಯಲ್ಲಿ ಧಣಿವು ನೀಗಿಸುವ ಕಾಯಕದಲ್ಲಿ ತೊಡಗಿ ಶ್ರೀ ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿಯವರ ಸೇವೆಯನ್ನ ಮಾಡುತ್ತ ಬಂದಿರುವುದು ವಿಶೇಷವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
