ಬೆಂಗಳೂರು:
ರಾಜ್ಯಕ್ಕೆ ಸವಾಲಾಗಿರುವ ಪ್ರಮುಖ ಸಮಸ್ಯೆಗಳನ್ನು, ವಿಶೇಷವಾಗಿ ಬರ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲಿದೆ. ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಸಚಿವರು, ಮುಖ್ಯ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
‘ ನಾವು ಬರ ಮತ್ತು ಇತರ ಪ್ರಮುಖ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸುತ್ತೇವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದು ಮಹತ್ವದ ಸಭೆ ಎಂದು ಸ್ಪಷ್ಟಪಡಿಸಿದ್ದಾರೆ.
ಬರಗಾಲಕ್ಕೆ ಸಂಬಂಧಿಸಿದಂತೆ, ಈ ತಿಂಗಳು ಕೆಲವು ಪ್ರದೇಶಗಳಲ್ಲಿ ಮಳೆಯಾಗಿರುವುದರಿಂದ ಅಂತಿಮ ಚಿತ್ರಣ ಸ್ಪಷ್ಟವಾಗುವುದಕ್ಕೆ ಸರ್ಕಾರವು ಸೆಪ್ಟೆಂಬರ್ ಅಂತ್ಯದವರೆಗೆ ಕಾಯಬೇಕೆಂದು ಕೆಲವು ತಜ್ಞರು ಸೂಚಿಸಿದ್ದಾರೆ. ರೈತ ಸಮುದಾಯಕ್ಕೆ ಲಾಭವಾಗಬೇಕಾದರೆ ನಿಯಮಾವಳಿಗಳನ್ನು ಸಡಿಲಿಸಬೇಕಾಗಿದೆ ಎಂದು ಸರ್ಕಾರ ಹೇಳಿದೆ.