ಇಂದು ದಾವಣಗೆರೆಗೆ ಸಿಎಂ….!

ಬೆಂಗಳೂರು:

       ಕಾಂಗ್ರೆಸ್ ​ ನಾಯಕ ಸಿದ್ದರಾಮಯ್ಯ   ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸಚಿವ ಸಂಪುಟ ರಚನೆ, ವಿಸ್ತರಣೆ ಮತ್ತು ಗ್ಯಾರೆಂಟಿ ಯೋಜನೆಗಳ ಜಾರಿಯಲ್ಲೇ ಬ್ಯುಸಿಯಾಗಿದ್ದರು. ಈ ಸಂಬಂಧ ಬೆಂಗಳೂರಿನಲ್ಲೇ  ವಾಸ್ತವ್ಯ ಹೂಡಿದ್ದು, ರಾಜಧಾನಿ ಬಿಟ್ಟು ಬೇರೆ ಜಿಲ್ಲೆಗಳಲ್ಲಿ ಹೋಗಲು ಸಾಧ್ಯವಾಗಿರಲಿಲ್ಲ.

     ಇದೀಗ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ಇಂದು ದಾವಣಗೆರೆಗೆ  ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.15ಕ್ಕೆ ಹೆಲಿಕಾಪ್ಟರ್​​ನಲ್ಲಿ ದಾವಣಗೆರೆಗೆ ತೆರಳಲಿದ್ದಾರೆ.

ನಂತರ ಮಧ್ಯಾಹ್ನ 12.30ಕ್ಕೆ ದಾವಣಗೆರೆ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ವಿಶೇಷ ಅಧಿಕಾರಿ ವಿಜಯಕುಮಾರ್ ಅವರ​ ಪುತ್ರಿ ಮದುವೆಯಲ್ಲಿ ಭಾಗಿಯಾಗಿ ಶುಭಹಾರೈಸಲಿದ್ದಾರೆ. ನಂತರ ಮಧ್ಯಾಹ್ನ 3.15ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link