ಇಂದು ಶ್ರೀದೇವಿ ಆಸ್ಪತ್ರೆಯಲ್ಲಿ ಸಿ.ಎಂ.ಇ. ಕಾರ್ಯಾಗಾರ

ತುಮಕೂರು:

               ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ವತಿಯಿಂದ ಆ.31 ರಂದು ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಶ್ರೀದೇವಿ ಆಸ್ಪತ್ರೆಯ ಸಭಾಂಗಣದಲ್ಲಿ ವೈಜ್ಞಾನಿಕ ಬೆಳವಣಿಗೆಗಳು ಮತ್ತು ಟ್ರಾನ್ಸ್ಯೂಷನ್ ಮೆಡಿಸನ್ ಹಾಗೂ ಕ್ಲಿನಿಕಲ್ ಹೆಮಟಾಲಜಿ ಇವರುಗಳ ಅಡಿಯಲ್ಲಿ ವೈದ್ಯಶಾಸ್ತ್ರ ಮತ್ತು ಫೆಥಾಲಿಜಿ (ರೋಗ ನಿರ್ಣಾಯ ಶಾಸ್ತ್ರ) ವಿಭಾಗಗಳಿಂದ ಶ್ರೀದೇವಿ ವೈದ್ಯಕೀಯ ಆಸ್ಪತ್ರೆಯ ಸಭಾಂಗಣದಲ್ಲಿ ನಿರಂತರ ವೈದ್ಯಕೀಯ ಶಿಕ್ಷಣ (ಸಿ.ಎಂ.ಇ) ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

                ಕಾರ್ಯಾಗಾರದ ಅಧ್ಯಕ್ಷತೆಯನ್ನು ಶ್ರೀದೇವಿ ಛಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಎಂ.ಆರ್. ಹುಲಿನಾಯ್ಕರ್ ರವರು ವಹಿಸಲಿದ್ದಾರೆ. ಕಾರ್ಯಾಗಾರದಲ್ಲಿ ರಕ್ತದ ಮಹತ್ವ ಹಾಗೂ ರಕ್ತ ನೀಡುವ ಮತ್ತು ಪಡೆಯುವ ವಿಷಯಗಳ ಬಗ್ಗೆ ನೂತನ ಅವಿಷ್ಕಾರಗಳ ವಿಚಾರ ಸಂಕೀರ್ಣವನ್ನು ಏರ್ಪಡಿಸಲಾಗಿತ್ತು. ಕಾರ್ಯಾಗಾರ ಪೋಷಕರಾಗಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾ ಲಯದ ನಿರ್ದೇಶಕರಾದ ಡಾ.ರಮಣ್ ಆರ್ ಹುಲಿನಾಯ್ಕರ್, ಮತ್ತು ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್.ಪಾಟೀಲ್, ಕಾರ್ಯಕ್ರಮದ ಸಂಘಟನಾ ಅಧ್ಯಕ್ಷರಾದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಡಿ.ಕೆ.ಮಹಾಬಲರಾಜು ರವರು ಭಾಗವಹಿಸಲಿದ್ದಾರೆ.

                  ಇದೇ ಸಂದರ್ಭದಲ್ಲಿ ಸಂಘಟನಾ ಕಾರ್ಯದರ್ಶಿಗಳಾದ ಶ್ರೀದೇವಿ ವೈದ್ಯಕೀಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶಾಲಿನಿ ಎಂ, ರೋಗ ನಿರ್ಣಾಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ಜಿ.ಹರೀಶ್ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಡಾ. ಎಂ.ಸಿ. ಕೃಷ್ಣ 9448660100, ಡಾ.ನವೀನ್ ಕೆ. 9986916252 ರವರನ್ನು ಸಂಪರ್ಕಿಸಬಹುದು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap