ಹಾವೇರಿ
ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ದಿನೇಶ ಗುಂಡೂರಾವ್ ಇಂದು (ದಿ 27) ನಗರದ ಸ್ಥಳೀಯ ಚುನಾವಣಾ ಪ್ರಚಾರಕ್ಕಾಗಿ ಬೆಳಿಗ್ಗೆ 10 ಘಂಟೆಗೆ ಆಗಮಿಸಲಿರುವರು. ಈ ಸಂದರ್ಭದಲ್ಲಿ ನಗರಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳ ಗೆಲುವಿಗಾಗಿ ಪ್ರಚಾರ ಕಾರ್ಯಕ್ರಮಕ್ಕೆ ಕೆಪಿಸಿಸಿಯ ಎಲ್ಲ ಪದಾಧಿಕಾರಿಗಳು.ಎಲ್ಲ ಜನಪ್ರತಿನಿಧಿಗಳು. ಜಿಲ್ಲೆ,ತಾಲೂಕ ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು. ಪಕ್ಷದ ಮುಖಂಡರು. ಕಾರ್ಯಕರ್ತರು ಭಾಗವಹಿಸಬೇಕೆಂದು ಮಾಜಿ ಸಚಿವರಾದ ರುದ್ರಪ್ಪ ಲಮಾಣಿ ಪ್ರಕಟಣೆ ಕೋರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ