ಇಡಿ ದುರ್ಬಳಕೆಗೆ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ರಾಹುಲ್‌ ಗಾಂಧಿ ವಿಚಾರಣೆ ವಿರೋಧಿಸಿ ಬೆಂಗಳೂರಿನಲ್ಲಿ ಇಡಿ ಕಚೇರಿ ಮುಂದೆ ಕಾಂಗ್ರೆಸ್‌ ಪ್ರತಿಭಟನೆ

ಕೈ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು : ನ್ಯಾಷನಲ್‌ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದನ್ನು ವಿರೋಧಿಸಿ ರಾಜ್ಯ ನಾಯಕರು ಪ್ರತಿಭಟನೆ ನಡೆಸಿದರು.

ನಗರದ ಡಬಲ್ ರಸ್ತೆ, ಲಾಲ್ ಬಾಗ್ ಗೇಟ್ ಬಳಿ ಕಾಂಗ್ರೆಸ್‌ ಮುಖಂಡರು ಹಾಗೂ ಮಹಿಳಾ ಕಾರ್ಯಕ್ರರು ಪ್ರತಿಭಟನೆ ರ್ಯಾಲಿ ಮಾಡಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಕೈಗೊಂಬೆಯಾದ ಇಡಿ : ವಿರೋಧ ಪಕ್ಷದ ನಾಯಕ, ಸಿದ್ಧರಾಮನ್ನು ಮಾತನಾಡಿ, ಸರ್ಕಾರದ ಎಲ್ಲಾ ಸ್ವತಂತ್ರ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಕೈಗೊಂಬೆಯಾಗಿ ಮಾಡಿಕೊಂಡಿದೆ, ಆರ್.ಬಿ.ಐ. ಸಿಎಬಿ, ಸಿಬಿಐ, ಇಡಿ ಸೇರಿದಂತೆ ಎಲ್ಲಾ ಸಂಸ್ಥೆಗಳು ಇದರ ತಾಳಕ್ಕೆ ಕುಣಿಯುವಂತೆ ಮಾಡಿಕೊಂಡಿದ್ದಾರೆ, ಆದಾಯ ತೆರಿಗೆ ಇಲಾಖೆ ಮತ್ತು ಇಡಿ ಇಲಾಖೆಯನ್ನು ವಿರೋಧ ಪಕ್ಷಗಳ ಮೇಲೆ ಛೂ ಬಿಡಲು ಇಟ್ಟುಕೊಂಡಿದ್ದಾರೆ. ದೇಶದ ಇತಿಹಾಸದಲ್ಲಿ ಇಂತಹ ನಿದರ್ಶನಗಳೇ ಇಲ್ಲ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹತ್ತಿಕುವ ಕೆಲಸ ಪ್ರಧಾನಿ ಮಾಡುತ್ತಿದ್ದಾರೆ.

೪೦ ಪರ್ಸೆಂಟ್‌ ಸರ್ಕಾರದ ಮೇಲೆ ತನಿಕೆ ಎಲ್ಲಿ.? ದೇಶದಲ್ಲಿ ರಾಹುಲ್‌ ಗಾಂಧಿ, ಹಾಗೂ ಸೋನಿಯಾ ಗಾಂಧಿ ವಿರುದ್ಧ ಇಡಿ ಮೂಲಕ ಸುಳ್ಳಿ ಕೇಸ್ ಹಾಕಿ ಕಿರುಕುಳ ನೀಡುತ್ತಿದ್ದಾರೆ. ಹಾಗಾಗಿ ಅವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸುತ್ತಾ, ಸುಳ್ಳು ಕೇಸ್ ಹಾಕಿರುವವರ ವಿರುದ್ಧ ಈ ಹೋರಾಟ ಮಾಡುತ್ತಿದ್ದೇವೆ, ಒಂದು ವರ್ಷದ ಹಿಂದೆ 40 ಪರ್ಸೆಂಟ್ ಕಮೀಷ‌ನ್ ನಡೆಯುತ್ತಿದೆ’ ಎಂದು ತಿಳಿಸಿದರು. ಒಂದು ತನಿಕರ ಮಾಡಿಸಲಿಲ್ಲ, ಇಡಿ ಛೂ ಬಿಟ್ರಾ? ಅಥವಾ ಯಾರ ಮೇಲಾದರೂ ಕೇಸ್ ಹಾಕಿಸಿದ್ದೀರಾ, ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿ ಈ ಸರ್ಕಾರದ ವಿರುದ್ಧ ಕ್ರಮ ಕೈಗೊಂಡಿಲ್ಲ, ಈ ದೇಶದ ಸ್ವತಂತ್ರ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಯ ವಿರುದ್ಧ ಇಡಿ ದಾಳಿ ಮಾಡಿಸಿದ್ದೀರಲ್ಲ ನಿಮಗೆ ನಾಚಿಕೆಯಾಗಬೇಕು ಎಂದು ನೇರವಾಗಿ ಪ್ರಶ್ನಿಸಿದರು.

ನ್ಯಾಷನಲ್‌ ಹೆರಾಲ್ಡ್ ಪತ್ರಿಕೆ ಹುಟ್ಟಿದ್ದು ಸ್ವಾತಂತ್ರಕ್ಕಾಗಿ : ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಸಹಾಯ ಮಾಡಿದೆ. ಕಾಂಗ್ರೆಸ್ ನಾಯಕರು ತ್ಯಾಗ ಬಲಿದಾನ ಮಾಡಿದ್ದಾರೆ. ಬಿಜೆಪಿಯವರಿಗೆ ತ್ಯಾಗ ಎಂದರೆ ಏನು ಅಂತ ಗೊತ್ತಾ? ನೀವು ನಮಗೆ ದೇಶ ಪಾಠ ಹೇಳಿಸಲು ಬರುತ್ತೀರ. ಇಡೀ ದೇಶ ಲೂಟಿ ಹೊಡೆದು ಹಾಳು ಮಾಡುತ್ತಿದ್ದೀರ, ದೇಶಾದ್ಯಂತ ಕೋಟ್ಯಾಂತರ ಕಾಂಗ್ರೆಸ್‌ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಹೋರಾಡುತ್ತಾರೆ, ಎಲ್ಲಾ ಸರ್ಕಾರಿ ಕಚೇರಿ ಬಂದ್‌ ಮಾಡಬೇಕಾಗುತ್ತಿದೆ, ಇದು ನಿರಂತರ ಹೋರಾಟ, ಕಾಂಗ್ರೆಸ್ ನಾಯಕರನ್ನು ಹೆದುರಿಸಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದರು.

ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ : ಶಾಂತಿ ನಗರ ಬಿಎಂಟಿಸಿ ಬಸ್ ನಿಲ್ದಾಣದ ಕಟ್ಟಡದಲ್ಲಿರುವ ಇ.ಡಿ. ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಶಾಂತಿ ನಗರ ಬಸ್ ನಿಲ್ದಾಣದ ಸಿಗ್ನಲ್ ಬಳಿ ಪೊಲೀಸರು ತಡೆದರು. ಬಳಿಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಟ್ರಾಫಿಕ್ ಜಾಮ್ : ಕಾಂಗ್ರೆಸ್ ಪ್ರತಿಭಟನೆ ಹಿನ್ನಲೆಯಲ್ಲಿ ಡಬಲ್ ರೋಡ್, ಹೊಸೂರ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಪರ್ಯಾಯ ರಸ್ತೆಯಲ್ಲಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ. ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ, ಮಾಜಿ ಸಚಿವರಾದ ಕೆ. ಜೆ. ಜಾರ್ಜ್, ಆರ್. ವಿ. ದೇಶಪಾಂಡೆ, ಶಾಸಕರಾದ ಹ್ಯಾರಿಸ್, ರಂಗನಾಥ್, ಎಂಎಲ್ಸಿ ಯು. ಬಿ. ವೆಂಕಟೇಶ್ ಮತ್ತಿತರ ಮುಖಂಡರು ಭಾಗವಹಿಸಿದ್ದರು

Recent Articles

spot_img

Related Stories

Share via
Copy link
Powered by Social Snap