ಇಡಿ ಯಿಂದ ಎಫ್.ಐ.ಆರ್ ದಾಖಲು : ಡಿಕೆಶಿಗೆ ಮತ್ತೆ ಬಂಧನದ ಭೀತಿ..!

ಬೆಂಗಳೂರು:

     ಮೊನ್ನೆ ತಾನೆ ಆದಾಯ ತೆರಿಗೆ ಇಲಾಖೆಯಿಂದ ದಾಖಲಾದ ಪ್ರಕರಣಗಳಲ್ಲಿ ಜಾಮೀನು ಪಡೆದು ನಿಟ್ಟುಸಿರು ಬಿಟ್ಟಿದ್ದ ಡಿ.ಕೆ.ಶಿವಕುಮಾರ್​​ ವಿರುದ್ಧ ಇದೀಗ ಜಾರಿ ನಿರ್ದೇಶನಾಲಯ ಎಫ್​ಐಆರ್ ದಾಖಲಿಸಿದೆ.

      ದೆಹಲಿಯ ಅಪಾರ್ಟ್​ವೆುಂಟ್​ನಲ್ಲಿ ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದ 8.59 ಕೋಟಿ ರೂ.ಗೆ ಸಂಬಂಧಿಸಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್​ಗೆ ಜಾರಿ ನಿರ್ದೇಶನಾಲಯ ದೆಹಲಿಯಲ್ಲಿ ಎಫ್​ಐಆರ್ ದಾಖಲಿಸಿದ್ದು, ಬಂಧನ ಭೀತಿ ಎದುರಾಗಿದೆ.

      ಪ್ರಕರಣದ ಎ1 ಆರೋಪಿ ಡಿ.ಕೆ. ಶಿವಕುಮಾರ್, ಎ2 ಸುನೀಲ್ ಶರ್ಮಾ, ಎ3 ಆಂಜನೇಯ ಮತ್ತು ಎ4 ರಾಜೇಂದ್ರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದ್ದು, ಈ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆ ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಿತ್ತು.

      ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಎಸ್. ಆಳ್ವ ಜಾಮೀನು ಮಂಜೂರು ಮಾಡಿ ಶನಿವಾರ ಆದೇಶ ಹೊರಡಿಸಿದ್ದರು. ಜತೆಗೆ 25 ಸಾವಿರ ರೂ. ಶ್ಯೂರಿಟಿ ಮತ್ತು 1 ಲಕ್ಷ ರೂ. ಬಾಂಡ್ ನೀಡಲು ಸೂಚಿಸಿದ್ದರು. ಅಲ್ಲದೆ, ಸಾಕ್ಷಿಗಳ ಮೇಲೆ ಪರಿಣಾಮ ಬೀರಬಾರದು ಮತ್ತು ತನಿಖೆಗೆ ಸಹಕರಿಸಬೇಕು ಎಂದು ತಿಳಿಸಿದ್ದರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap