ಇತರೆ ರಾಜ್ಯದ ಸರ್ಕಾರಿ ಉದ್ಯೋಗದಲ್ಲಿ ಎಸ್.ಸಿ./ಎಸ್.ಟಿ.ಮೀಸಲಾತಿ ಇಲ್ಲ..!?

ನವದೆಹಲಿ:

 

      ಪರಿಶಿಷ್ಟ ಜಾತಿ ಮತ್ತ ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗಳು ಬೇರೆ ರಾಜ್ಯದಲ್ಲಿನ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕೇಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

      ಉದ್ಯೋಗದ ನಿಮಿತ್ತ ಪರಿಶಿಷ್ಟ ಜಾತಿ ಮತ್ತ ಪರಿಶಿಷ್ಟ ಪಂಗಡದ ವ್ಯಕ್ತಿ ಬೇರೆ ರಾಜ್ಯಕ್ಕೆ ವಲಸೆ ಹೋಗಿದ್ದರೆ ಅಲ್ಲಿ ಮೀಸಲಾತಿ ಕೇಳುವಂತಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಈ ಕುರಿತು ಇಂದು ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.  

     ಒಂದು ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಎಂದು ಪರಿಗಣಿಸಲಾಗಿರುವ ಸಮುದಾಯ ಮತ್ತೊಂದು ರಾಜ್ಯದಲ್ಲಿ ಅದೇ ಸ್ಥಾನಮಾನ ಹೊಂದಿರಬೇಕೆಂದೇನೂ ಇಲ್ಲ. ಉದ್ಯೋಗ ಮತ್ತು ಇತರ ಕಾರಣಗಳಿಗಾಗಿ ಬೇರೆ ರಾಜ್ಯಕ್ಕೆ ತೆರಳಿದವರು ಅಲ್ಲಿಯೂ ಮೀಸಲಾತಿ ಸೌಲಭ್ಯ ಪಡೆಯಲಾಗದು ಎಂದು ಪೀಠ ಹೇಳಿದೆ. ಸರ್ಕಾರಿ ಉದ್ಯೋಗದಲ್ಲಿನ ಮೀಸಲಾತಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap