ಬೆಂಗಳೂರು

ಇಸ್ರೋ ಮಾಜಿ ಅಧ್ಯಕ್ಷ, ಪದ್ಮಶ್ರೀ ಕೆ.ಕಸ್ತೂರಿರಂಗನ್ (84) ವಿಧಿವಶರಾಗಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಕೆ.ಕಸ್ತೂರಿರಂಗನ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಬೆಳ್ಳಗ್ಗೆ 10.43ಕ್ಕೆ ಕೊನೆಯುಸಿರು ಎಳೆದಿದ್ದಾರೆ. ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು 1994ರಿಂದ 2003ರವರೆಗೆ ಇಸ್ರೋ ಅಧ್ಯಕ್ಷರಾಗಿದ್ದರು. ಕೆ. ಕೃಷ್ಣಸ್ವಾಮಿ ಅವರು ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.
ಕೆ. ಕೃಷ್ಣಸ್ವಾಮಿ ಅವರು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ್ದರು. ಇವರು ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಅದ್ಭುತವಾದ ಸಾಧನೆಗಳನ್ನು ಮಾಡಿದ್ದರು.
ಡಾ. ಕಸ್ತೂರಿರಂಗನ್ ಅವರು ಬಾಂಬೆ ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದರು. 1971 ರಲ್ಲಿ ಅಹಮದಾಬಾದ್‌ನಲ್ಲಿ ಖಗೋಳಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದ್ದರು. ಇವರು ಅಧ್ಯಕ್ಷರಾಗಿದ್ದ ಸಮಯದಲ್ಲಿ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದೆ. ಉಡಾವಣಾ ವಾಹನವಾದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಯಶಸ್ವಿ ಉಡಾವಣೆ ಮತ್ತು ಕಾರ್ಯಾಚರಣೆ ಮತ್ತು ಇತ್ತೀಚೆಗೆ, ಎಲ್ಲ ಪ್ರಮುಖ ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಜಿಎಸ್‌ಎಲ್‌ವಿ) ಯ ಮೊದಲ ಯಶಸ್ವಿ ಹಾರಾಟ ಪರೀಕ್ಷೆ ಇವರ ನಾಯಕತ್ವದಲ್ಲೇ ನಡೆದಿದೆ.
ಕೆ. ಕಸ್ತೂರಿರಂಗನ್ ಅವರು ವಿಶ್ವಸಂಸ್ಥೆಯ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಶಿಕ್ಷಣ ಕೇಂದ್ರದ (UN-CSSTE) ಆಡಳಿತ ಮಂಡಳಿ, ಐಐಟಿ ಚೆನ್ನೈನ ಆಡಳಿತ ಮಂಡಳಿ, ರಾಮನ್ ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿ ಮತ್ತು ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯದ ಸಂಶೋಧನಾ ಮಂಡಳಿಯ ಅಧ್ಯಕ್ಷರಾಗಿದ್ದರು.
ಕೆ. ಕಸ್ತೂರಿರಂಗನ್ ಅವರಿಗೆ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಸಂದಿವೆ. ಖಗೋಳಶಾಸ್ತ್ರ, ಬಾಹ್ಯಾಕಾಶ ವಿಜ್ಞಾನ, ಬಾಹ್ಯಾಕಾಶ ಅನ್ವಯಿಕೆಗಳ ಕ್ಷೇತ್ರಕ್ಕೆ ಸಂಬಂಧಿಸಿದ 200 ಕ್ಕೂ ಹೆಚ್ಚು ಪ್ರಬಂಧಗಳು ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ. ಮತ್ತು 6 ಪುಸ್ತಕಗಳನ್ನು ಬರೆದಿದ್ದಾರೆ. ಕೆ. ಕಸ್ತೂರಿರಂಗನ್ ಎನ್‌ಇಪಿ ಕರಡು ಸಮಿತಿಯ ಅಧ್ಯಕ್ಷರಾಗಿದ್ದರು. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಭಾನುವಾರ (ಏ.27) ರ ಬೆಳಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
