ಉಗ್ರರ 2 ಅಡಗುತಾಣ ಧ್ವಂಸ ; ಶಸ್ತ್ರಾಸ್ತ್ರ ವಶ!!

ಶ್ರೀನಗರ: 

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೂರಾ ಅರಣ್ಯ ಪ್ರದೇಶದಲ್ಲಿ ಉಗ್ರರ 2 ಅಡಗು ತಾಣಗಳನ್ನು ಪತ್ತೆಹಚ್ಚಿ, ಧ್ವಂಸ ಮಾಡಲಾಗಿದೆ.

     ಇಂದು ಬೆಳಗ್ಗೆ ನಡೆದ ಭಾರತೀಯ ಭದ್ರತಾ ಪಡೆ ಶೋಧ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಯ ಎರಡು ಅಡಗುತಾಣಗಳನ್ನು ಪುಲ್ವಾಮಾ ಜಿಲ್ಲೆಯ ಆವಂತಿಪೊರದಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಎರಡೇ ದಿನಗಳು ಬಾಕಿ ಇರುವುದರಿಂದ ಶೋಧ ಕಾರ್ಯಾಚರಣೆ ನಡೆಸಿದ್ದ ಭದ್ರತಾ ಪಡೆಯ ಸಿಬ್ಬಂದಿ ಇಂದು ಬೆಳಗ್ಗೆ ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. 

     ಇಲ್ಲಿ ಅಪಾರ ಪ್ರಮಾಣದ ಮದ್ದುಗುಂಡುಗಳು, ಬಾಂಬ್ ತಯಾರಿಕೆಗೆ ಬಳಸುತ್ತಿದ್ದ ಸ್ಫೋಟಕ ವಸ್ತುಗಳಿದ್ದವು. ಇನ್ನೂ ಹೆಚ್ಚು ಗುಪ್ತ ಸ್ಥಳಗಳಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

      ಈ ಸಂಬಂಧ ಆವಂತಿಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap