ಉದ್ಯೋಗದ ನೆಪದಲ್ಲಿ ಮಹಿಳೆಯರಿಗೆ ಕಿರುಕುಳ : ಟೆಕ್ಕಿ ಬಂಧನ

ಬೆಂಗಳೂರು, ಫೆಬ್ರವರಿ. 03: ಉದ್ಯೋಗ ಕೊಡಿಸುವ ನೆಪದಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಟೆಕ್ಕಿಯನ್ನು ಆಗ್ನೇಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು 36 ವರ್ಷದ ದಿಲೀಪ್ ಪ್ರಸಾದ್ ಎಂದು ಗುರುತಿಸಲಾಗಿದೆ. ಮಹಿಳೆಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಅವರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡುತ್ತಿದ್ದರು ಎಂದು ವರದಿಯಾಗಿದೆ.

ಉದ್ಯೋಗವನ್ನು ಹುಡುಕುತ್ತಿರುವ ವಿವಾಹಿತ ಮಹಿಳೆಯರನ್ನು ಗುರುತಿಸಿ ಅವರನ್ನು ಪರಿಚಯ ಮಾಡಿಕೊಂಡು ಪ್ರಮುಖ ಕಂಪನಿಗಳ ಹೆಸರುಗಳನ್ನು ಹೇಳಿ, ಉತ್ತಮ ಸಂಬಳ ಸಿಗುವ ಕೆಲಸ ಕೊಡಿಸುವ ಭರವಸೆ ನೀಡುತ್ತಿದ್ದರು. ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಮಹಿಳೆಯರ ಚಿತ್ರಗಳನ್ನು ಹಾಕಿ ತಾನು ಮಹಿಳೆ ಎಂದು ನಂಬಿಕೆ ಬರುವಂತೆ ನಟಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ವೇಳೆ ಆರೋಪಿ ದಿಲೀಪ್ ಪ್ರಸಾದ್ ಹಲವು ಮಹಿಳೆಯರಿಗೆ ವಂಚನೆ ಮಾಡಿರುವುದು ಪೊಲೀಸರಿಗೆ ಪತ್ತೆಯಾಗಿದೆ. ಇದಲ್ಲದೆ ಆತನ ಮೊಬೈಲ್ ಫೋನ್‌ನಲ್ಲಿ ಹಲವು ಮಹಿಳೆಯರ ಆಕ್ಷೇಪಾರ್ಹ ವಿಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link