ದಾವಣಗೆರೆ:
ಇಲ್ಲಿನ ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಎಎಸ್ಐ ಒಬ್ಬರ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಮಹಿಳಾ ಪೊಲೀಸ್ ಠಾಣೆಯ ಎಎಸ್ಐ ಶೋಭಾ ಮತ್ತು ಎಲೆಕ್ಟ್ರಿಕಲ್ ಗುತ್ತಿಗೆದಾರ ಚೈತನ್ಯ ಕುಮಾರ್ ದಂಪತಿ ಪುತ್ರ ಸಿ.ವರುಣ್ಕುಮಾರ್ (17) ಎಂಬುವನೇ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದಾನೆ.
ನಗರದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವರುಣ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಹಿನ್ನೆಲೆಯಲ್ಲಿ ಮನ ನೊಂದುಕೊಂಡಿದ್ದ. ತಂದೆ-ತಾಯಿ ಇಬ್ಬರೂ ಕೆಲಸಕ್ಕೆ ಹೋಗಿದ್ದ ವೇಳೆಯಲ್ಲಿ ಸೋಮವಾರ ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದುಕೊಂಡು ವರುಣ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಕೆಟಿಜೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
