ಹಾವೇರಿ :
ಎಲ್ಲರೂ ರಾತ್ರಿ ಕನಸು ಕಂಡರೆ, ಸರ್ಕಾರ ಕೆಡವಿ ಸಿಎಂ ಆಗ್ತೀನಿ ಅಂತಾ ಬಿಎಸ್‌ವೈ ಹಗಲುಗನಸು ಕಾಣುತ್ತಿದ್ದಾರೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ. ಅವರ ಜೊತೆಗೆ ನಮ್ಮವರು ಐದು ಜನರೂ ಇಲ್ಲ. ಸರಕಾರ ಐದು ವರ್ಷಗಳ ಕಾಲ ಸುಭದ್ರವಾಗಿ ಇರುತ್ತೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮೈತ್ರಿ ಸರ್ಕಾರದಲ್ಲಿ ಯಾವುದೇ ಭಿನ್ನಮತವಿಲ್ಲ. ಯಾವ ಶಾಸಕರೂ ಬಿಜೆಪಿಗೆ ಹೋಗಲ್ಲ. ಯಾವ ಶಾಸಕರಲ್ಲಿಯೂ ಅಸಮಾಧಾನವಿಲ್ಲ. ಬಂಡಾಯ ಶಾಸಕರೆಲ್ಲರೂ ನಮ್ಮ ಸಂಪರ್ಕದಲ್ಲಿದ್ದಾರೆ. ಯಾರೂ ಕೂಡ ಪಕ್ಷ ಬಿಟ್ಟು ಹೋಗುತ್ತಿಲ್ಲ. ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ