ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯಲ್ಲಿ ಸಿಸಿ ಟೀವಿ ಕಣ್ಗಾವಲು. 

ಪರೀಕ್ಷಾ ಕೇಂದ್ರದಲ್ಲಿ ಸ್ಯಾನಿಟೈಸ್
ರಾಜ್ಯಾದ್ಯಂತ 6,797 ವಿದ್ಯಾರ್ಥಿಗಳು ಗೈರು.
15 ಅನಾರೋಗ್ಯ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ.
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಆರಂಭವಾಗಿದ್ದು. ಜೂನ್ 27 ರಿಂದ ಜುಲೈ 4ರ ವರೆಗೆ ಪೂರಕ ಪರೀಕ್ಷೆ ನಡೆಯಲಿದೆ.
2021-22ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿರುವ ವಿದ್ಯಾರ್ಥಿಗಳಿಗೆ, ಈ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಮೇ 19 ರಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿತ್ತು.
ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ಆರಂಭವಾಗಿದ್ದು. ಈ ಬಾರಿ ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ, 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಕ್ರಮ ವಹಿಸಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಸ್ಯಾನಿಟೈಸೇಷನ್ :
ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆ ಆರಂಭಕ್ಕೂ ಮೊದಲು ಮತ್ತು, ನಂತರ ಸ್ಯಾನಿಟೈಸ್ ಮಾಡುವುದು. ಪರೀಕ್ಷಾ ಕೊಠಡಿಯ ಎಲ್ಲಾ ಪೀಠೋಪಕರಣ ಸ್ಯಾನಿಟೈಸ್ ಮಾಡುವುದು. ದೈಹಿಕ ಅಂತರ ಕಾಪಾಡುವುದು. ಪ್ರತಿ ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳಿರಬೇಕು. ಒಂದು ಡೆಸ್ಕ್ ಗೆ ಇಬ್ಬರು ವಿದ್ಯಾರ್ಥಿಯಂತೆ ಆಸನದ ವ್ಯವಸ್ಥೆ ಮಾಡಲಾಗಿತ್ತು.
ಸೋಮವಾರ ನಡೆದ ವಿಜ್ಞಾನ ವಿಷಯದ ಪರೀಕ್ಷೆಯಲ್ಲಿ ರೆಗ್ಯೂಲರ್ ಮತ್ತು ಖಾಸಗೀ ಸೇರಿ ಒಟ್ಟು 43,062 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ 36,265 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ. ಉಳಿದ 6,797 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇನ್ನೂ ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ 15 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.

Recent Articles

spot_img

Related Stories

Share via
Copy link