ಬೆಂಗಳೂರು:
ದೆಹಲಿಯಲ್ಲಿನ ತಮ್ಮ ನಿವಾಸಗಳ ಮೇಲೆ ನಡೆದ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ರದ್ದು ಕೋರಿ ಸಚಿವ ಡಿ.ಕೆ ಶಿವಕುಮಾರ್ಮತ್ತು ಆಪ್ತರು ಸಲ್ಲಿಸಿದ್ದ ಅರ್ಜಿ ವಿಚಾರಣೆಯು ಗುರುವಾರ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ನಡೆಯಿತು.
ಈ ವೇಳೆ ಕೋರ್ಟ್ಗೆ 250ಕ್ಕೂ ಹೆಚ್ಚು ಪುಟಗಳ ಪ್ರಾಥಮಿಕ ತನಿಖೆ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಇಡಿ ಸಲ್ಲಿಸಿತು. ಇನ್ನು ಇಡಿ ಪರ ಎಎಜಿ ಪ್ರಭುಲಿಂಗ ನಾವಡಗಿ ವಾದ ಮಾಡಿದರು.ಇಡಿ ಅರ್ಜಿದಾರ ಡಿಕೆ ಶಿವಕುಮಾರ್ ಅವರನ್ನು ವಿಚಾರಣೆಗೆ ಮಾತ್ರ ಕರೆದಿದೆ. ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿದೆ. ಈ ಹಂತದಲ್ಲಿ ಸಮನ್ಸ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ತನಿಖೆ ನಡೆಸಿ ವರದಿ ಸಲ್ಲಿಸಿದ ನಂತರ ಪ್ರಶ್ನಿಸಲು ಅವಕಾಶವಿದೆ. ಹೀಗಾಗಿ ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ಇಡಿ ಪರ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದರುಈ ವೇಳೆ ಹೈಕೋರ್ಟ್ ವಾದ ಆಲಿಸಿದ ಹೈಕೊರ್ಟ್ ಅರ್ಜಿ ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ