ತೆಲಂಗಾಣ:
ಒಂದೇ ಕುಟುಂಬದ 6 ಮಂದಿ ಸೇರಿದಂತೆ 9 ವಲಸೆ ಕಾರ್ಮಿಕರ ಮೃತದೇಹ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ.
ತೆಲಂಗಾಣದ ವರಂಗಲ್ ಜಿಲ್ಲೆಯ ಗೊರ್ರೆಗುಂಟಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಒಂದೇ ಬಾವಿಯಿಂದ ನಿನ್ನೆ 4 ಮೃತ ದೇಹಗಳನ್ನು ಹೊರತೆಗೆದಿದ್ದ ಪೊಲೀಸರು ಇಂದು ಮತ್ತೆ 5 ಹೆಣಗಳನ್ನು ಹೊರತೆಗೆದಿದ್ದಾರೆ. ಆ ಮೂಲಕ ಒಟ್ಟು 9 ಹೆಣಗಳನ್ನು ಹೊರತೆಗೆಯಲಾಗಿದೆ.
ಮೃತ 9 ಮಂದಿಯ ಪೈಕಿ 8 ಮಂದಿ ವಲಸೆ ಕಾರ್ಮಿಕರು ಎಂದು ತಿಳಿದುಬಂದಿದೆ. ಮೃತ ಕಾರ್ಮಿಕರ ಪೈಕಿ 6 ಮಂದಿ ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಇಬ್ಬರು ಬಿಹಾರ ಮೂಲದವರೆಂದು ತಿಳಿದುಬಂದಿದೆ.
ಮೇಲ್ನೋಟಕ್ಕೆ ಇದು ಸಾಮೂಹಿಕ ಆತ್ಮಹತ್ಯೆ ಎಂದು ಹೇಳಲಾಗುತ್ತಿದೆಯಾದರೂ, ಸಾವಿನ ಹಿಂದಿನ ನಿಖರ ಕಾರಣ ಬಹಿರಂಗವಾಗಿಲ್ಲ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಗೀಸುಕೊಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಶ್ವಾನದಳ ಆಗಮಿಸಿ ತನಿಖೆ ನಡೆಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ