ಬೆಂಗಳೂರು:
ಒಡಿಶಾ ರಾಜ್ಯದ ಬಾಲಸೋರ್ ದುರ್ಘಟನೆಯಲ್ಲಿ 233 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ.
ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು…
— Siddaramaiah (@siddaramaiah) June 3, 2023
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ, ಒಡಿಶಾದ ಬಾಲಸೋರ್‌ನಿಂದ ಬಂದ ಹೃದಯ ವಿದ್ರಾವಕ ಸುದ್ದಿಯಿಂದ ಅತೀವ್ರ ನೋವು ತಂದಿದೆ. ರೈಲಿನ ಬೋಗಿಗಳು ಹಳಿತಪ್ಪು, ಭಾರೀ ಅಪಘಾತ ಸಂಭವಿಸಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆಂದು ತಿಳಿಸಿದ್ದಾರೆ.