ಒಡಿಶಾ ರೈಲು ಅಪಘಾತ ಪ್ರಕರಣ : FIR ದಾಖಲಿಸಿದ CBI

ನವದೆಹಲಿ: 

     ಒಡಿಶಾ ತ್ರಿವಳಿ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ತಿಳಿಸಿದೆ.

     ‘ರೈಲ್ವೆ ಸಚಿವಾಲಯದ ಕೋರಿಕೆಯ ಮೇರೆಗೆ ಮತ್ತು ಒಡಿಶಾ ಸರ್ಕಾರದ ಒಪ್ಪಿಗೆಯೊಂದಿಗೆ ನಾವು ಪ್ರಕರಣವನ್ನು ದಾಖಲಿಸಿದ್ದೇವೆ. ಘಟನೆಯು ಒಡಿಶಾ ರಾಜ್ಯದ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್‌ನಲ್ಲಿ ಜೂನ್ 2ರಂದು ಕೋರಮಂಡಲ್ ಎಕ್ಸ್‌ಪ್ರೆಸ್, ಯಶವಂತಪುರ-ಹೌರಾ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಸಂಬಂಧಿಸಿದ ರೈಲು ಅಪಘಾತಕ್ಕೆ ಸಂಬಂಧಿಸಿದೆ’ ಎಂದು ಸಿಬಿಐ ಹೇಳಿದೆ.

 

     ಒಡಿಶಾದ ಕಟಕ್ ಜಿಲ್ಲೆಯ ಬಾಲಸೋರ್ ಜಿಆರ್‌ಪಿಎಸ್‌ನಲ್ಲಿ ಈ ಹಿಂದೆ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈಗಾಗಲೇ ಒಡಿಶಾದ ಬಾಲಸೋರ್‌ನಲ್ಲಿ ಸಿಬಿಐ ತಂಡವಿದೆ.

 

    ರೈಲ್ವೆ ಸಚಿವ ವೈಷ್ಣವ್ ಅವರು ವಿರೋಧ ಪಕ್ಷಗಳಿಂದ ಟೀಕೆಗಳನ್ನು ಎದುರಿಸಿದರು. ರೈಲ್ವೆಯಲ್ಲಿನ ಲೋಪಗಳನ್ನು ಎತ್ತಿ ತೋರಿಸುವ ಹಲವಾರು ವರದಿಗಳು ಮತ್ತು ಲೆಕ್ಕಪರಿಶೋಧನೆಗಳನ್ನು ಉಲ್ಲೇಖಿಸಿ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸಿದವು. 

    ಒಡಿಶಾದ ಬಾಲಸೋರ್‌ನ ಬಹನಾಗ ಬಜಾರ್ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಜೆ ಕೋರಮಂಡಲ್ ಎಕ್ಸ್‌ಪ್ರೆಸ್, ಎಸ್‌ಎಂವಿಪಿ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ 21 ಕೋಚ್‌ಗಳು ಡಿಕ್ಕಿ ಹೊಡೆದು ಮತ್ತು ಹಳಿತಪ್ಪಿದ ಭೀಕರ ದುರಂತಗಳಲ್ಲಿ ಕನಿಷ್ಠ 278 ಜನರು ಸಾವಿಗೀಡಾಗಿದ್ದಾರೆ ಮತ್ತು 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap