ಹುಳಿಯಾರು:
ಕ್ರೀಡೆ ಒತ್ತಡ ನಿವಾರಣೆಗೆ ದಿವ್ಯ ಔಷಧಿಯಾಗಿದ್ದು ಪ್ರತಿಯೊಬ್ಬರು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಾಂಶುಪಾಲ ಕೃಷ್ಣಮೂರ್ತಿ ಬಿಳಿಗೆರೆ ತಿಳಿಸಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನ ಆಚರಣೆಯಲ್ಲಿ ಮಾತನಾಡಿದರು.ಪ್ರತಿನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಕ್ರೀಡೆಯಿಂದ ಬುದ್ಧಿಶಕ್ತಿ ಹಾಗೂ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂದರು.ಕಾಲೇಜಿನ ಕ್ರೀಡಾ ವಿಭಾಗದ ನಿರ್ದೇಶಕ ಆರ್.ಶಿವಯ್ಯ, ವಿದ್ಯಾರ್ಥಿಗಳು ಪಠ್ಯದ ಜತೆ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಇತ್ತೀಚೆಗೆ ಪಠ್ಯದಷ್ಟೆ ಮಹತ್ವವನ್ನು ಕ್ರೀಡೆಗೂ ನೀಡಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಡಾ.ಲೋಕೇಶ್ ನಾಯ್ಕ, ರಘು ಹಾಗೂ ವಿದ್ಯಾರ್ಥಿಗಳಿದ್ದರು. ಇದೇ ಸಂದರ್ಭದಲ್ಲಿ ಟೆಬಲ್ ಟೆನಿಸ್ ಅಂಕಣ ಉದ್ಘಾಟಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
