ಒಳ್ಳೆಯದನ್ನೇ ಬಿತ್ತಿ ಒಳ್ಳೆಯದನ್ನೇ ಬೆಳೆಯಬೇಕು : ಜಸ್ಟಿಸ್ ಅಬ್ದುಲ್ ನಜೀರ್

ಬೆಂಗಳೂರು

     ಸಮಾಜದಲ್ಲಿ ನಿಸ್ವಾರ್ಥ ಸೇವೆ ಅಗತ್ಯವಿದ್ದು, ಸೇವಾ ಮನೋಭಾವದ ಸಾಧಕರನ್ನು ಗುರುತಿಸು ಪ್ರೋತ್ಸಾಹಿಸುವುದು ಇಂದಿನ ಅಗತ್ಯ ಎಂದು ಆಂಧ್ರಪ್ರದೇಶ ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಜೀರ್ ಹೇಳಿದ್ದಾರೆ.

     ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ದಾದಿಯರಿಗೆ ನ್ಯಾಷನಲ್ ಫ್ಲೋರೆನ್ಸ್ ನೈಟಿಂಗೆಲ್ ನರ್ಸ್ ಪ್ರಶಸ್ತಿ ಮತ್ತು ಸಾಮಾಜಿಕ ನ್ಯಾಯ ವಲಯದಲ್ಲಿ ಮದರ್ ಥೆರೆಸಾ ಸ್ಮಾರಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಸಮಾಜದಲ್ಲಿ ಸೇವಾ ಮನೋಭಾವನೆ ಇನ್ನಷ್ಟು ಹೆಚ್ಚಾಗಬೇಕು.

    ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದು, ಇದರೊಂದಿಗೆ ಮಾನವೀಯ ಗುಣಗಳು ಸಹ ಹೆಚ್ಚಾಗಬೇಕು. ಸಂಕಷ್ಟ ಮತ್ತು ಅಗತ್ಯವಿರುವವರಿಗೆ ಸಮಾಜ ಬೆಂಬಲವಾಗಿ ನಿಲ್ಲಬೇಕು ಎಂದರು. ಮಾನವೀಯ ಸೇವೆಗೆ ಫ್ಲಾರೆನ್ಸ್ ನೈಟಿಂಗೇಲ್ ಮತ್ತು ಮದರ್ ಥೆರಾಸಾ ಮಾದರಿಯಾಗಿದ್ದು, ಸಾಧಕರು ಇವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಕೂಡ ವಿಶೇಷವಾಗಿದ್ದು, ಸಮಾಜದಲ್ಲಿ ಒಳ್ಳೆಯತವನ್ನು ಬಿತ್ತಿ ಒಳ್ಳೆಯದನ್ನೇ ಬೆಳೆಯಬೇಕು ಎಂದು ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಜೀರ್ ಹೇಳಿದರು.

     ಹಿರಿಯ ಸಹಕಾರಿ ಧುರೀಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರೀಯ ಸಹಕಾರ ಒಕ್ಕೂಟದ ಗೌರವಾನ್ವಿತ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್ ಸೇರಿದಂತೆ ಹಲವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಸ್. ಚಂದ್ರಶೇಖರ ಶೆಟ್ಟಿ, ಸಿಸ್ಟರ್ ಮೇರಿ ಅಗ್ಮೀಸ್, ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್ ಮತ್ತಿತರರು ಉಪಸ್ಥಿತರಿದ್ದರು.

 

Recent Articles

spot_img

Related Stories

Share via
Copy link