ಬೆಂಗಳೂರು
3 ಸಾವಿರ ವರ್ಷಗಳ ದೀರ್ಘ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಶೀಘ್ರವೇ ಸ್ವಾಯತ್ತ ಸ್ಥಾನಮಾನ ನೀಡಬೇಕು ಎಂದು ಸಂಸದ ಈರಣ್ಣ ಕಡಾಡಿ ಆಗ್ರಹಿಸಿದ್ದಾರೆ.
ರಾಜ್ಯಸಭೆಯಲ್ಲಿ ಕನ್ನಡದಲ್ಲಿಯೇ ವಿಷಯ ಪ್ರಸ್ತಾಪಿಸಿದ ಅವರು, ಕನ್ನಡಕ್ಕೆ 2008 ರಲ್ಲಿ ಶಾಸ್ತಿಯ ಸ್ಥಾನಮಾನ ನೀಡಲಾಗಿದೆ. ಭಾಷೆಯ ಬೆಳವಣಿಗೆ ಮತ್ತು ಸಂಶೋಧನೆಗಾಗಿ 2011 ರಲ್ಲಿ ಮೈಸೂರಿನ ಭಾರತೀಯ ಭಾಷೆಗಳ ಕೇದ್ರ ಸಂಸ್ಥೆಯಲ್ಲಿ ಶಾಸ್ತಿçÃಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದರು.
ಕನ್ನಡ ಭಾಷೆಯ ಅಧ್ಯಯನ ಮತ್ತು ಸಂಶೋಧನೆಗೆ ಕರ್ನಾಟಕ ಸರ್ಕಾರ ಹೆಚ್ಚಿನ ಉತ್ತೇಜನ ನೀಡಿದೆ. ಆದರೆ ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತ ಸ್ಥಾನಮಾನ ನೀಡಿಲ್ಲ. ಈ ಹಿನ್ನೆಲೆಯಲ್ಲಿ ತಮಿಳು ಭಾಷೆಗೆ ನೀಡಿರುವಂತೆ ಕನ್ನಡಕ್ಕೂ ಸ್ವಾಯತ್ತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ