ಬೆಳಗಾವಿ
ನನಗೆ ಮರಾಠಿ ಬರಲ್ಲ, ಕನ್ನಡ ಮಾತಾಡಿ ಎಂದಿದ್ದಕ್ಕೆ ಕೋಪಗೊಂಡು ಬಸ್ ಕಂಡಕ್ಟರ್ ಮೇಲೆ ಗುಂಪು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ನಗರದ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ ನಗರದಿಂದ ಸುಳೇಬಾವಿ ಕಡೆಗೆ ಹೊರಟಿದ್ದ ರಾಜ್ಯ ರಸ್ತೆ ಸಾರಿಗೆ ಬಸ್‌ನಲ್ಲಿ ಟಿಕೆಟ್ ವಿಚಾರವಾಗಿ ಪ್ರಯಾಣಿಕರು ಹಾಗೂ ಕಂಡಕ್ಟರ್ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿ ಭಾಷಿಕರ ಗುಂಪು ದಾಳಿ ಮಾಡಿದೆ ಎಂದು ಕಂಡಕ್ಟರ್ ಹೇಳಿದ್ದಾರೆ. ಈ ಕುರಿತು ಮಹಾದೇವ್ ಹುಕ್ಕೇರಿ ಎಂಬುವವರು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
