ಬೆಂಗಳೂರು :
ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ಎಲ್ಲಾ ಎಸ್ಕಾಂಗಳಿಗೆ ಖಡಕ್ ಸೂಚನೆ ನೀಡಿದೆ..ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಗೃಹಜ್ಯೋತಿ ಯೋಜನೆ ಇನ್ನೂ ಜಾರಿಯಾಗಿಲ್ಲ.
ಆದರೆ ಜನರು ಕರೆಂಟ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಸೂಚನೆ ನೀಡಿದೆ.
ಜನರು ಬಾಕಿ ಇರುವ, ಪ್ರಸ್ತುತ ವಿದ್ಯುತ್ ಬಿಲ್ ಪಾವತಿಸಬೇಕು. ಬಳಸಿರುವ ವಿದ್ಯುತ್ ಬಿಲ್ ಪಾವತಿಸಬೇಕು ಎಂದು ಸೂಚನೆ ನೀಡಿದೆ.ಕರೆಂಟ್ ಬಿಲ್ ಪಾವತಿ ವಿಳಂಬ ಮಾಡಿದ್ರೂ ದಂಡ ಹಾಕಲಾಗುವುದು. 3 ತಿಂಗಳ ಬಿಲ್ ಬಾಕಿ ಕಟ್ಟದಿದ್ದರೆ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದೆ.
ಕಾಂಗ್ರೆಸ್ ಚುನಾವಣೆಗೂ ಮುನ್ನ 200 ಯುನಿಟ್ ವಿದ್ಯುತ್ ಉಚಿತ ಎಂದು ಘೋಷಿಸಿತ್ತು. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಈವರೆಗೂ ಗೃಹಜ್ಯೋತಿ ಯೋಜನೆಯ ಆದೇಶ ಹೊರಡಿಸಿಲ್ಲ. ಆದೇಶ ಬರೋವರೆಗೂ ಕರೆಂಟ್ ಬಿಲ್ ಪಾವತಿಸದಿದ್ದರೆ ದಂಡ ಹಾಕಲಾಗುವುದು ಎಂದು ಇಂಧನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ