ತಿಪಟೂರು
ಕಲೆ ಮತ್ತು ವಾಣಿಜ್ಯ ಮನುಷ್ಯನ ಜೀವನಕ್ಕೆ ಅತ್ಯಗತ್ಯ, ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವ್ಯಾವಹಾರಿಕವಾಗಿ ತಮ್ಮ ಪ್ರತಿಭೆಯನ್ನು ತೋರಿಸಬೇಕು ಎಂದು ಬೆಂಗಳೂರು ಸಾಹಿತಿ ಬಿ.ಆರ್.ಲಕ್ಷ್ಮಣರಾವ್ ತಿಳಿಸಿದರು.
ನಗರದ ಕಲ್ಪತರು ವಿದ್ಯಾ ಸಂಸ್ಥೆಯ ಆಡಿಟೋರಿಯಂನಲ್ಲಿ ನಡೆದ ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ 2018-19ನೇ ಶೈಕ್ಷಣಿಕ ವರ್ಷದ ಸಾಂಸ್ಕತಿಕ, ಕ್ರೀಡೆ, ಎನ್.ಎಸ್.ಎಸ್. ಎನ್.ಸಿ.ಸಿ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಯುವ ರೆಡ್‍ಕ್ರಾಸ್ ಚಟುವಟಿಕೆಗಳ ಸಮಾರೋಪ ಸಮಾರಂಭದ ಪ್ರತಿಭಾಶ್ರೀ-2019 ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಉತ್ತಮ ವೇದಿಕೆಯನ್ನು ಕಲ್ಪತರು ವಿದ್ಯಾಸಂಸ್ಥೆಯು ರೂಪಿಸಿರುವುದು ಶ್ಲಾಘನೀಯ.
ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಇಂದಿನ ಕಾರ್ಯಕ್ರಮವನ್ನು ನೀಡುತ್ತಿರುವುದು ಉತ್ತಮ. ಮನುಷ್ಯನ ಒಳ ಜೀವನದ ಬದುಕಿನಲ್ಲಿ ಕಲೆ, ಹೊರ ಜೀವನದಲ್ಲಿ ವ್ಯಾವಹಾರಿಕವಾಗಿ ವಾಣಿಜ್ಯಬೇಕು. ನಮ್ಮ ಕನ್ನಡ ಸಂಸ್ಕøತಿ ಇಂದು ಕಾಲೇಜಿನ ಆವರಣದಲ್ಲಿ ಎದ್ದು ಕಾಣುತ್ತಿದೆ. ನಮ್ಮ ಕನ್ನಡ ಭಾಷೆಯನ್ನು ಇಂದು ಎಲ್ಲರೂ ಉಳಿಸಿ ಬೆಳೆಸಬೇಕು ಎಂದು ತಮ್ಮ ಹಾಸ್ಯ ಕವನ, ಕಾವ್ಯಗಳ ಮೂಲಕ ವಿದ್ಯಾರ್ಥಿಗಳಿಗೆ ಮನರಂಜಿಸಿದರು.
ತುಮಕೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಸಂಯೋಜಕರಾದ ಆರ್.ಸುದೀಪ್‍ಕುಮಾರ್ ಮಾತನಾಡಿ, ಕಲ್ಪತರು ಸಂಸ್ಥೆಯಲ್ಲಿ ಪ್ರತಿಭಾನ್ವಿತ ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿಯೂ ವಿದ್ಯಾರ್ಥಿಗಳು ಮುಂಚೂಣಿಯಲ್ಲಿದ್ದಾರೆ. ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡಿ ಕ್ರೀಡಾ ಕ್ಷೇತ್ರದ ಮೂಲಕ ವಿದ್ಯಾರ್ಥಿಗಳು ಜೀವನವನ್ನು ರೂಪಿಸಿಕೊಂಡು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸುವಂತೆ ಆಶಿಸಿದರು.ಕಾರ್ಯಕ್ರಮದಲ್ಲಿ ಕ್ರೀಡೆ ಹಾಗೂ ಶಿಕ್ಷಣದಲ್ಲಿ ಹೆಚ್ಚು ಅಂಕಗಳಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ.ಎಸ್.ಬಿ.ಬಸವರೆಡ್ಡಿ, ವಿಜ್ಞಾನ ವಿಭಾಗದ ಪ್ರಾಂಶುಪಾಲರಾದ ಶಿವಣ್ಣ, ತಾಂತ್ರಿಕ ವಿಭಾಗದ ಪ್ರಾಂಶುಪಾಲರಾದ ನಂದೀಶಯ್ಯ, ಕಾರ್ಯದರ್ಶಿಗಳಾದ ರುದ್ರಮುನಿ, ರಾಜಕುಮಾರ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








