ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದಲ್ಲಿ ಬಿ.ಎಸ್.ಯಡಿಯೂರಪ್ಪ ಸಿಎಂ ಆಗುವುದು ನಿಶ್ಚಿತ

ದಾವಣಗೆರೆ:

     ಜೆಡಿಎಸ್-ಕಾಂಗ್ರೆಸ್ ಪಕ್ಷಗಳಲ್ಲಿ ಹೊಂದಾಣಿಕೆ ಇಲ್ಲದೇ, ಆ ಪಕ್ಷಗಳ ಶಾಸಕರು ರಾಜೀನಾಮೆ ಕೊಟ್ಟರೆ, 104 ಶಾಸಕರ ಬಲ ಹೊಂದಿರುವ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಸಂತೇಬೆನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವುದೇ ಆಪರೇಷನ್ ಕಮಲ ನಡೆಸುವುದಿಲ್ಲ. ಆ ಎರಡೂ ಪಕ್ಷಗಳಲ್ಲಿ ಶಾಸಕರು ಮತ್ತು ಆ ಪಕ್ಷಗಳ ನಾಯಕರುಗಳ ಮಧ್ಯೆ ಹೊಂದಾಣಿಕೆಯ ಕೊರತೆ ಇದೆ. ಹಾಗಾಗಿ, ಜೆಡಿಎಸ್-ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವ ವದಂತಿ ಹರಡಿದೆ. ಅವರು ರಾಜೀನಾಮೆ ಕೊಟ್ಟರೆ, ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆಂದು ಹೇಳಿದರು.
ಸಿಎಂ ಕುಮಾರಸ್ವಾಮಿ ಆರೋಪಿಸಿರುವ ಕಿಂಗ್‍ಪಿನ್ ಬಗ್ಗೆ ಪ್ರತಿಕ್ರಯಿಸಿದ ಸಿದ್ದೇಶ್ವರ್, ಯಾವ ಕಿಂಗೂ ಇಲ್ಲ ಪಿನ್ನೂ ಇಲ್ಲ ಎಂದ ಅವರು, ಬಿಜೆಪಿಯ ಒಬ್ಬ ಶಾಸಕನೂ ಸಹ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಅದೇ ನಮ್ಮ ಪಕ್ಷಕ್ಕಿರುವ ಶಿಸ್ತು ಎಂದರು.

       ಇದೇ ಸಂದರ್ಭದಲ್ಲಿ ಚನ್ನಗಿರಿ ಶಾಸಕ ಕೆ.ಮಾಡಾಳು ವಿರೂಪಾಕ್ಷಪ್ಪ ಮಾತನಾಡಿ, ಇಂದಿನ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಅವರ ಪಕ್ಷದ ಶಾಸಕರನ್ನು ಹಿಡಿತದಲ್ಲಿಟ್ಟು ಕೊಳ್ಳಬೇಕಾಗಿರುವುದರಿಂದ ಇಂತಹ ಸನ್ನಿವೇಶಗಳನ್ನು ಅನಿವಾರ್ಯವಾಗಿ ಸೃಷ್ಟಿಯಾಗುತ್ತಿವೆ. ಹೊರತು, 104 ಜನ ಬಿಜೆಪಿಯ ಶಾಸಕರಲ್ಲಿ ಒಬ್ಬರೂ ಸಹ ಇತರೆ ಪಕ್ಷಗಳಿಗೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

       ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಆತ್ಮಗೌರವಕ್ಕೆ ಧಕ್ಕೆ ಬರುವ ರೀತಿಯಲ್ಲಿ ನಡೆಸಿಕೊಂಡುದರ ಪ್ರತಿಫಲವಾಗಿ ಆ ಪಕ್ಷಗಳ ಮೇಲೆ ಬೇಸತ್ತು ಅವರು ರಾಜೀನಾಮೆ ಕೊಡುತ್ತಿದ್ದಾರೆ. ಅವರು ರಾಜೀನಾಮೆ ಕೊಟ್ಟು ಹೊರಹೋದಲ್ಲಿ ಬಹುಮತ ಇರುವ ಬಿಜೆಪಿ ಅಧಿಕಾರ ವಹಿಸಲಿಕೊಳ್ಳಲಿದೆ. ನಾವೂ ಕೂಡ ಯಾರನ್ನು ಸಂಪರ್ಕಿಸಿಲ್ಲ ಎಂದರು.

               ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap