ಬೆಂಗಳೂರು
ಕಾಂಗ್ರೆಸ್ ನವರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಈಗ ಲಿಂಗಾಯತ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆ ನೋಡೊಣ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಜನರ ಮತ್ತು ರಾಜ್ಯದ ಅಭಿವೃದ್ಧಿ ಮಾಡಲಿ. ಅವರಿಗೆ ಇಲ್ಲಿಯವರೆಗೂ ಮುಖ್ಯಮಂತ್ರಿ ಆಯ್ಕೆ ಮಾಡಲು ಅಗುತ್ತಿಲ್ಲ. ಬೇಗ ಮುಖ್ಯಮಂತ್ರಿ ಆಯ್ಕೆಯನ್ನು ಮಾಡಲಿ ಎಂದರು. ಪೂರ್ಣ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಮಾಡದೇ ಇರುವುದು ಪಕ್ಷದಲ್ಲಿನ ಹೊಂದಾಣಿಕೆ ಸರಿ ಇಲ್ಲ ಎನ್ನುದುನ್ನು ತೋರಿಸುತ್ತದೆ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ತಮ್ಮ ರಾಜಕೀಯ ಬಿಟ್ಟು ಆದಷ್ಟು ಬೇಗ ಮುಖ್ಯಮಂತ್ರಿ ಆಯ್ಕೆ ಮಾಡಿ, ಸರ್ಕಾರ ರಚಿಸಿ ಜನರ ಸೇವೆ ಮಾಡಲಿ ಎಂದರು.
ಲಿಂಗಾಯತ ಸಮುದಾಯದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಬಹಳ ಮಾತನಾಡಿದ್ದಾರೆ. ಅವರು ಲಿಂಗಾಯತ ನಾಯಕರಿಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಯಾವ ಯಾವ ಹುದ್ದೆಗಳನ್ನು ಕೊಡುತ್ತಾರೆ ಕಾದು ನೋಡೋಣ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ