ಕಾಂಗ್ರೆಸ್ ಮಹಿಳಾ ಘಟಕದಿಂದ ಡಿಸಿಎಂ ವಿರುದ್ಧ ಪ್ರತಿಭಟನೆ..!

ಬೆಂಗಳೂರು

   ವಿಧಾನಸಭೆಯ ಕಲಾಪದ ವೇಳೆ ಅಶ್ಲೀಲ ಚಿತ್ರ ವೀಕ್ಷಿಸಿದ್ದ ಲಕ್ಷ್ಮಣ ಸವದಿ ಅವರನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಕೈಬಿಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಮಲ್ಲೇಶ್ವರಂನ ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಪ್ರದೇಶ ಕಾಂಗ್ರೆಸ್ ನೂರಕ್ಕೂ ಹೆಚ್ಚು ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

   ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ ಮುಂಭಾಗ ಶನಿವಾರ ಸೇರಿದ ನೂರಾರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಲಕ್ಷ್ಮಣ ಸವದಿ ವಿರುದ್ಧ ಘೋಷಣೆ ಕೂಗುತ್ತಾ ಉಪಮುಖ್ಯಮಂತ್ರಿ ಸ್ಥಾನದಿಂದ ಕೂಡಲೇ ಕೈಬಿಡುವಂತೆ ಆಕ್ರೋಶ ವ್ಯಕ್ತಪಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ತಡೆದು ವಶಕ್ಕೆ ತೆಗೆದುಕೊಂಡು ಬಸ್‍ನಲ್ಲಿ ಕರೆದೊಯ್ದು ಸಂಜೆ ಬಿಡುಗಡೆಗೊಳಿಸಿದರು.

   ಮುತ್ತಿಗೆಗೂ ಮುನ್ನ ಕಚೇರಿ ಮುಂಭಾಗ ಸಮಾವೇಶಗೊಂಡ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಮಹಿಳಾ ಘಟಕದ ಅಧ್ಯಕ್ಷೆ ಪುಪ್ಪಾ ಅಮರನಾಥ್, ಲಕ್ಷ್ಮಣ ಸವದಿ ಅವರ ಮೇಲೆ ಅಶ್ಲೀಲ ಚಿತ್ರ ವೀಕ್ಷಿಸಿ ಗಂಭೀರ ಆರೋಪ ಎದುರಿಸಿದ್ದು ಇಂತಹ ವ್ಯಕ್ತಿಗೆ ರಾಜ್ಯದ ಪ್ರಮುಖ ಸ್ಥಾನ ನೀಡಿರುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

    ಲಕ್ಷ್ಮಣ ಸವದಿ ಅವರ ಸ್ಥಾನದಿಂದ ಮಹಿಳಾ ವರ್ಗಕ್ಕೆ ಅವಮಾನಕರ. ಹಾಗಾಗಿ, ಈ ಕೂಡಲೇ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟ ದಿಂದ ಕೈಬಿಡಬೇಕು.ಇಲ್ಲದಿದ್ದಲ್ಲಿ, ಹೋರಾಟ ತೀವ್ರ ಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಅತಿವೃಷ್ಟಿ, ನೆರೆ ಸಂತ್ರಸ್ತರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಯಾವುದೇ ಕಾಳಜಿ ಇಲ್ಲ. ಅಷ್ಟೇ ಅಲ್ಲದೆ, ಅವರಿಗೆ ಯಾವುದೇ ನೆರವು ನೀಡಿಲ್ಲ. ನಾವು ಮಾಡಿರುವ ಕೆಲಸಗಳನ್ನು ಅಧಿಕಾರದಲ್ಲಿರುವ ಯಡಿಯೂರಪ್ಪ ಅವರು ಮಾಡುತ್ತಿಲ್ಲ ಎಂದು ಆರೋಪಿಸಿದರು.ಬಿಜೆಪಿ ನಾಯಕರು, ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಂವಿಧಾನಿಕ ಸಂಸ್ಥೆಗಳ ಮೂಲಕ ಕಿರುಕುಳ ನೀಡುತ್ತಿದ್ದಾರೆ.ಇದನ್ನು ಜನರು ನೇರವಾಗಿ ಗಮನಿಸುತ್ತಿದ್ದಾರೆ ಎಂದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ಕಿರುಕುಳ ನೀಡುವುದು ಈ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

    ಲಕ್ಷ್ಮಣ ಸವದಿ ಅವರಿಗೆ ಉನ್ನತ ಸ್ಥಾನ ನೀಡಿರುವುದನ್ನು ಬಿಜೆಪಿ ಮಹಿಳಾ ನಾಯಕರಾದ ಶೋಭಾ ಕರಂದ್ಲಾಜೆ, ಮಾಳವಿಕಾ, ತಾರಾ, ಶೃತಿ, ಭಾರತಿ ಶೆಟ್ಟಿ ಖಂಡಿಸಬೇಕು. ಇಲ್ಲದಿದ್ದರೆ, ನಾವು ಹೋರಾಟ ಚುರುಕುಗೊಳಿಸುತ್ತೇವೆ ಎಂದು ಪುಷ್ಪ ಅಮರನಾಥ್ ಎಚ್ಚರಿಕೆ ನೀಡಿದರು.

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link