ಕಾಂಗ್ರೆಸ್‌ ಸರ್ಕಾರಕ್ಕೆ ಶ್ರೀನಿವಾಸ್‌ ಪೂಜಾರಿ ಸವಾಲ್‌….!

ಬೆಂಗಳೂರು:

     ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಸುವಲ್ಲಿ ಯಶಸ್ವಿಯಾಗಿತ್ತು. ಚುನಾವಣೆಯಲ್ಲಿ ಬಿಜೆಪಿ ಸೋಲಲು ಇದೂ ಒಂದು ಕಾರಣವಾಗಿತ್ತು.

     ಚುನಾವನೆಯಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳೊಂದಿಗೆ ಬಹುಮತ ಪಡೆದು ಸರ್ಕಾರ ರಚಿಸಿದ್ದರೆ, 66 ಸ್ಥಾನಗಳಲ್ಲಿ ಗೆದ್ದಿರುವ ಬಿಜೆಪಿ ವಿಪಕ್ಷ ಸ್ಥಾನದಲ್ಲಿ ಕುಳಿತಿದೆ. ಇದೀಗ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

     ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸವಾಲು ಹಾಕಿದ್ದು, ಕಮಿಷನ್ ಆರೋಪದ ತನಿಖೆ ಮೊದಲು ನನ್ನಿಂದಲೇ ಆರಂಭವಾಗಲಿ ಅನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ತಿರುಗೇಟು ನೀಡಿದರು.

     ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ಕೇಂದ್ರದ ನಾಯಕರು ಕೂಡ ಕಾರಣ ಎಂದ ರೇಣುಕಾಚಾರ್ಯ ಬುಧವಾರ ಮಂಗಳೂರಿನಲ್ಲಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು 40 ಪರ್ಸೆಂಟ್ ಕಮಿಷನ್ ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ತನಿಖೆಯನ್ನು ಮುಕ್ತವಾಗಿ ನಾನು ಸ್ವಾಗತ ಮಾಡುತ್ತೇನೆ ಎಂದು ತಿಳಿಸಿದರು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವನಾಗಿದ್ದ ನನ್ನಿಂದಲೇ ತನಿಖೆ ಶುರುವಾಗಲಿ.

     ಇಡೀ ಇಲಾಖೆಯ ತನಿಖೆ ಮಾಡಲಿ, ಯಾವ ತನಿಖೆಯಲ್ಲಿ ಏನಾಗುತ್ತದೆ ನೋಡೋಣ. ವ್ಯಕ್ತಿಗತ ದ್ವೇಷಕ್ಕೆ ಅವಕಾಶ ಕೊಡಬಾರದು, ನಿಷ್ಪಕ್ಷಪಾತ ಆದರೂ ತನಿಖೆ ನಡೆಸಲಿ ಎಂದು ಕೋಟ ಶ್ರೀನಿವಾಸ ಪೂಜಾರಿ ಸವಾಲು ಹಾಕಿದರು. ಡಿಕೆಶಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪೊಲೀಸರಿಗೆ ಕೇಸರಿ ಶಾಲು ಆರೋಪ ಮಾಡಿರುವ ಕುರಿತು ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, “ಡಿ.ಕೆ. ಶಿವಕುಮಾರ್ ಅಧಿಕಾರಿಗಳ ಮೇಲೆ ಕಿಡಿಕಾರಿರುವ ದೃಷ್ಯ ಕಂಡುಬಂದಿದೆ.

     ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧವಾಗಿಲ್ಲ. ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಖಾಸಗಿ ಜೀವನದದಲ್ಲಿನ ಪೊಲೀಸರ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ, ತಮ್ಮ ಮಾತನ್ನು ಪುನರ್ ಪರಿಶೀಲನೆ ಮಾಡಬೇಕು,” ಎಂದು ಅಭಿಪ್ರಾಯಪಟ್ಟರು.

    “ಚಿತ್ರದುರ್ಗ ಜಿಲ್ಲೆಯ ಶಿಕ್ಷಕರೊಬ್ಬರು ಮುಖ್ಯಮಂತ್ರಿಗಳ ಸಾಲದ ಪೋಸ್ಟ್ ಮಾಡಿದ್ದಕ್ಕಾಗಿ ಅಮಾನತು ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ದ್ವೇಷ ಸಾಧಿಸುವ ವಾತಾವರಣ ಕಂಡು ಬರುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ತರುವುದಿಲ್ಲ. ಅದನ್ನು ಪುನರ್ ಪರಿಶೀಲಿಸಲಿ. ಸಾಮಾನ್ಯವಾಗಿ ಹಿಂದುತ್ವದ ವಿಚಾರ ಇಟ್ಟುಕೊಂಡು ಈ ಸರ್ಕಾರದ ಗುರಿ ಇದೆ. ಮುಂದಿನ ದಿನಗಳಲ್ಲಿ ಹಿಂದುತ್ವ ಮತ್ತು ಹಿಂದೂಗಳಿಗೆ ಕಠಿಣ ದಿನಗಳು ಬರಲಿವೆ,” ಎಂದು ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ಹೊರಹಾಕಿದರು.

    ಇನ್ಯಾವುದೋ ಸಮುದಾಯವನ್ನು ಓಲೈಕೆ ಮಾಡಲು ಹಿಂದುತ್ವದ ಚಟುವಟಿಕೆಗಳನ್ನು ನಿಷೇಧ ಮಾಡುವುದಾಗಲಿ, ನೈತಿಕ ಪೊಲೀಸ್‌ಗಿರಿ ಆರೋಪ ಮಾಡಿ ಬಂಧಿಸುವ ಕೆಲಸ ಇನ್ಮುಂದೆ ಆಗಲಿದೆ. ಮುಂದಿನ ದಿನಗಳಲ್ಲಿ ಗೋಹತ್ಯೆ ಕಾಯ್ದೆ, ಮತಾಂತರ ಕಾಯ್ದೆ, ಮತಾಂತರ ಕಾಯ್ದೆ ವಿರೋಧಿಸುವ ಕಾರ್ಯತಂತ್ರ ರೂಪುಗೊಂಡಿದೆ. ಪ್ರಜಾಪ್ರಭುತ್ವದಲ್ಲಿ ವಿಪಕ್ಷವಾಗಿ ನಾವು ಜನಸಾಮಾನ್ಯರಿಗೆ ರಕ್ಷಣ ನೀಡುವ ಕೆಲಸ ಮಾಡುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap