ಬೆಂಗಳೂರು:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ಕೆಲವು ಅಪರಿಚಿತರು ನಕಲಿ ವೆಬ್ ಸೈಟ್ ತೆರೆದಿರುವುದನ್ನು ಗಮನಿಸಿ ರಾಜ್ಯ ಕಾಂಗ್ರೆಸ್ ಪೊಲೀಸರಿಗೆ ದೂರು ಸಲ್ಲಿಸಿದೆ.
ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು ಅದರಲ್ಲಿ ಒಂದು ಮಾದರಿ ನಕಲಿ ವೆಬ್ ಸೈಟ್ ಮಾಡಿ ಮಾನ ಹಾನಿ ಹಣ ದೋಚುವುದು ಮುಂತಾದ ಅಪರಾಧ ಮಾಡಲು ಇದು ದಾರಿ ಮಾಡಿಕೊಳ್ಳುತ್ತದೆ .
ನಕಲಿ ವೆಬ್ ಸೈಟ್ ನಲ್ಲಿ ಪಕ್ಷ ಹಾಗೂ ಅದರ ನಾಯಕರಿಗೆ ಅಗೌರವ ತರುವಂತಹ ಹೇಳಿಕೆಗಳನ್ನು ಫೋಸ್ಟ್ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯ ಶತಭಾಷ್ ಶಿವಣ್ಣ ಸೈಬರ್ ಕ್ರೈಮ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.
ನಕಲಿ ವೆಬ್ ಸೈಟ್ ತೆರೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಪೊಲೀಸರು ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಹೇಡಿಗಳ ಕೊನೆಯ ಅಸ್ತ್ರ ಅಪಪ್ರಚಾರ, ಕುಯುಕ್ತಿ ಎನ್ನುವ ಮಾತಿದೆ,
ಅದರಂತೆಯೇ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ಅವರ ಹೆಸರಿನ ನಕಲಿ ಪತ್ರ ಹಾಗೂ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಸೃಷ್ಟಿಸಿ ತೇಜೋವಧೆ ಮಾಡಿದವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ. pic.twitter.com/GNWHTTZNMh
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 3, 2023
ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೂ ದೂರು ಸಲ್ಲಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
