ಹಾನಗಲ್ಲ :
ಹಾನಗಲ್ಲ ಪುರಸಭೆ ಚುನಾವಣೆಯಲ್ಲಿ ವಿಜೆತರಾ ಕಾಂಗ್ರೇಸ್ ಸದಸ್ಯರು ಪಕ್ಷದ ನಾಯಕರನ್ನೊಳಗೊಂಡು ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಿದರು.
ಶನಿವಾರ ಪಟ್ಟಣದ ಶ್ರೀ ಕುಮಾರೇಶ್ವರ ವಿರಕ್ತಮಠದಿಂದ ಆರಂಭವಾದ ವಿಜಯೋತ್ಸವ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗುಲಾಲು ಎರಚಿ, ಮದ್ದು ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಪುರಸಭೆಗೆ ನೂತನವಾಗಿ ಆಯ್ಕೆಯಾದ ಕಾಂಗ್ರೇಸ್ ಪಕ್ಷದ 19 ಸದಸ್ಯರು. ಮಾಜಿ ಸಚಿವ ಮನೋಹರ ತಹಶೀಲ್ದಾರ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಆರ್.ಎಸ್.ಪಾಟೀಲ, ನಗರಾಧ್ಯಕ್ಷ ಎಂ.ಕೆ.ಹುಬ್ಬಳ್ಳಿ, ತಾಪಂ ಮಾಜಿ ಅಧ್ಯಕ್ಷ ಶಿವಬಸಪ್ಪ ಪೂಜಾರ ಮೊದಲಾದವರಿದ್ದರು.