ಚಳ್ಳಕೆರೆ
ನಗರದ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿಯ ಯುವಕರು ಹಾಗೂ ಭಕ್ತಾಧಿಗಳು ಭಾನುವಾರ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಹಮ್ಮಿಕೊಂಡಿದ್ದರು. ಕಾರ್ಯಕ್ರಮದ ಪ್ರಯುಕ್ತ ಭಗವಾನ್ ಶ್ರೀಕೃಷ್ಣ ಬೃಹತ್ ಭಾವಚಿತ್ರದ ಅಲಂಕರಿಸಿ ಶ್ರದ್ದಾ ಭಕ್ತಿಯಿಂದ ಪೂಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿಯ ಭಕ್ತಾಧಿಗಳು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು. ಈ ಬಗ್ಗೆ ಮಾಹಿತಿ ನೀಡಿದ ಅಲ್ಲಿನ ನಿವಾಸಿಗಳಾ ಗೌಡ್ರ ನಾಗಣ್ಣ, ಚನ್ನಣ್ಣ, ವೀರಣ್ಣ, ನಾಗರಾಜು, ಎಚ್.ಮಹಲಿಂಗಪ್ಪ, ಅಜ್ಜಯ್ಯ, ವೀರೇಶ್, ಬಾಲು, ವೈ.ಪ್ರಕಾಶ್ ಮುಂತಾದವರು ಕಳೆದ ಸುಮಾರು 20 ವರ್ಷಗಳಿಂದ ಸ್ವಯಂ ಪ್ರೇರಿತವಾಗಿ ಎಲ್ಲರ ಸಹಕಾರದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು ಈ ವರ್ಷವೂ ಸಹ ವಿಜೃಂಭಣೆಯಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ