ಬೆಂಗಳೂರು:
ದೇಶದಲ್ಲಿ ಕಾನೂನು ಶಿಕ್ಷಣವನ್ನು ಮತ್ತಷ್ಟು ಬಲಪಡಿಸಲು ಗಮನ ಕೊಡಬೇಕಾಗಿದೆ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಪ್ರತಿಪಾದಿಸಿದ್ದಾರೆ.
ರಾಷ್ಟ್ರೀಯ ಕಾನೂನು ಶಾಲೆಯ 26 ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ವಕೀಲರು ಸೇವಾ ಮನೋಭಾವನೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ಕಾನೂನು ಶಿಕ್ಷಣ, ಕಾನೂನು ಅರಿವು ಇಂದಿನ ಅಗತ್ಯಗಳಲ್ಲಿ ಬಹಳ ಮಹತ್ವ ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕಾನೂನು ಶಿಕ್ಷಣಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಚ್ಚಿನ ಆಸಕ್ತಿ ತಳೆಯಬೇಕು ಎಂದು ಅವರು ಹೇಳಿದರು.
ಬಳಿಕ ಮುಖ್ಯನ್ಯಾಯಮೂರ್ತಿ ಅವರು, ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‍ನ ನಿವೃತ್ತ ಮುಖ್ಯನ್ಯಾಯಮೂರ್ತಿ ಎಂ.ಎನ್. ವೆಂಕಟಚಾಲಯ್ಯ, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣೆಭೈರೇಗೌಡ ಭಾಗವಹಿಸಿದ್ದರು.
