ಕಾನೂನು ಸಾಕ್ಷರತಾ ರಥದ ಸದ್ವಿನಿಯೋಗಕ್ಕೆ ಕರೆ 

ಬಳ್ಳಾರಿ:
       
      ಕಾನೂನು ಸಾಕ್ಷರತಾ ರಥ ಯಾತ್ರೆ ಮುಖಾಂತರ ಕಾನೂನಿನ ಅರಿವು ಮೂಡಿಸುವುದರ ಜೊತೆಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳ ಕುರಿತು ಅರಿವು ಮೂಡಿಸಲಾಗುತ್ತದೆ. ಇದರ ಸದ್ವಿನಿಯೋಗವನ್ನು ಜನರು ಪಡೆದುಕೊಳ್ಳಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಕೆ.ಕಾತ್ಯಾಯಿನಿ ಹೇಳಿದರು.
   ಬಳ್ಳಾರಿ ತಾಲೂಕಿನ ರೂಪನಗುಡಿಯ ಗ್ರಾಪಂ ಆವರಣದಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ರಥ ಕಾರ್ಯಕ್ರಮದಲ್ಲಿ ಅವರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.
 
    ನೆರೆದಿದ್ದ ಜನರಿಗೆ ಕಾನೂನು ಸಾಕ್ಷರತಾ ರಥ ಯಾತ್ರೆಯ ಉದ್ದೇಶ, ಕಾನೂನಿಗೆ ಬಗ್ಗೆ ಹಾಗೂ ಕಾನೂನಿನಲ್ಲಿರುವ ಸೌಲಭ್ಯಗಳ ಬಗ್ಗೆ ಮತ್ತು ಕಾನೂನಿನ ನೆರವುಗಳ ಕುರಿತು ಸವಿಸ್ತಾರವಾಗಿ ತಿಳಿಸಿದರು.
     ಪ್ಯಾನಲ್ ವಕೀಲರಾದ ಬಸವರಾಜ್ ಅವರು ಗ್ರಾಹಕರ ಹಿತರಕ್ಷಣಾ ಕಾಯ್ದೆ ಮತ್ತು ಭೂ ಕಂದಾಯ ಅಧಿನಿಯಮ 1964ರ ಬಗ್ಗೆ ಅರಿವು ಮೂಡಿಸಿದರು. 
      ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಜ್ಯೋತಿ ಅವರು ಮಾತನಾಡಿ, ಮಹಿಳಾ ಮತ್ತು ಮಕ್ಕಳಿಗೆ ಅನೇಕ ಸೌಲಭ್ಯಗಳು ಇದ್ದು, ಇದರಲ್ಲಿ ಗರ್ಭಿಣಿಯರಿಗೆ ಪೌಷ್ಠಿಕ ಆಹಾರಕ್ಕಾಗಿ 5 ಸಾವಿರ ರೂ. ಗಳನ್ನು ಮೂರು ಹಂತದಲ್ಲಿ ನೀಡಲಾಗುತ್ತಿದೆ. ಅಂಗನವಾಡಿ ಕೇಂದ್ರಗಳಲ್ಲಿ 2 ರಿಂದ 6 ವರ್ಷ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಪೌಷ್ಠಿಕಾಂಶದ ಆಹಾರವನ್ನು ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. 
ಜಿಪಂ ಸದಸ್ಯ ಅಲ್ಲಂಪ್ರಶಾತ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. 
      ಬಾಲಕಾರ್ಮಿಕ ಯೋಜನಾಧಿಕಾರಿ ಮೌನೇಶ್, ಶಿಕ್ಷಣ ಇಲಾಖೆಯ ಅಧಿಕಾರಿ ವಿರುಪಾಕ್ಷಪ್ಪ, ತೋಟಗಾರಿಕೆ ಇಲಾಖೆಯ ರಾಘವೇಂದ್ರ, ಪಶುವೈದ್ಯಾಧಿಕಾರಿ ಡಾ.ಮಲ್ಲಿಕಾರ್ಜುನ ಪಾಟೀಲ್, ಕಂದಾಯ ಇಲಾಖೆಯ ನಿರೀಕ್ಷಕರಾದ ವರಪ್ರಸಾದ್ ಅವರು ಆಯಾ ಇಲಾಖೆಯ ಯೋಜನೆಗಳ ಕುರಿತು ಮಾಹಿತಿ ನೀಡಿದರು.    
      ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಡಿ.ಎಸ್.ಬದರಿನಾಥ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಾನಕಿರಾಮ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ, ವಕೀಲರ ಸಂಘದ ಕಾರ್ಯದರ್ಶಿ ಜಿ.ಎಂ.ರವಿರಾಜಶೇಖರೆಡ್ಡಿ, ರೂಪನಗುಡಿ ತಾಪಂ ಸದಸ್ಯ ಗೋವಿಂದಪ್ಪ, ಗ್ರಾಪಂ ಅಧ್ಯಕ್ಷ ಅನ್ನಪೂರ್ಣ ಮತ್ತು ಇತರೆ ಗಣ್ಯವ್ಯಕ್ತಿಗಳು ಇದ್ದರು. 
• ಚೇಳ್ಳಗುರ್ಕಿಯಲ್ಲಿ ಕಾನೂನು ಸಾಕ್ಷರತಾ ರಥ: ಬಳ್ಳಾರಿ ತಾಲೂಕಿನ ಚೆಳ್ಳಗುರ್ಕಿಯ ಶ್ರೀ ಎರ್ರಿತಾತ ದೇವಸ್ಥಾನ ಆವರಣದಲ್ಲಿ ನಡೆದ ಕಾನೂನು ಸಾಕ್ಷರತಾ ಕಾರ್ಯಕ್ರಮಕ್ಕೆ 4ನೇ ಅಪರ ಸಿವಿಲ್ ನ್ಯಾಯಾಧೀಶರಾದ ನಿರ್ಮಲ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಸಾಕ್ಷರತಾ ವಾಹನದಲ್ಲಿ ಸರ್ಕಾರದ ಸೌಲಭ್ಯಗಳ ಕುರಿತ ಮಾಹಿತಿಯನ್ನು ವಿವಿಧ ಇಲಾಖೆಯ ಅಧಿಕಾರಿಗಳು ತಿಳಿಸುವ ಮೂಲಕ ಅರಿವು ಮೂಡಿಸುವ ಕೆಲಸ ಮಾಡಲಿದ್ದಾರೆ. ಇದರ ಸದುಪಯೋಗ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.
   ಪ್ಯಾನಲ್ ವಕೀಲರಾದ ಎಂ.ಪ್ರಭಾವತಿ ಅವರು ಮಾತನಾಡಿ, ದೈಹಿಕ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಸವಿಸ್ತಾರವಾಗಿ ಜನರಿಗೆ ತಿಳಿಸಿದರು. 
    ಶಿಕ್ಷಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಅವರು ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಉಚಿತವಾಗಿ ಪೌಷ್ಠಿಕಾಂಶವುಳ್ಳ ಮಧ್ಯಾಹ್ನ ಬಿಸಿ ಊಟ ನೀಡಲಾಗುತ್ತಿದೆ. ವಾರದಲ್ಲಿ 5 ದಿನ ಹಾಲನ್ನು ನೀಡುತ್ತಿದ್ದು, ಉಚಿತ ಶಿಕ್ಷಣ ನೀಡಲಾಗುತ್ತಿದೆ ಎಂದರು. 
ಪಶುವೈದ್ಯಾಧಿಕಾರಿ ವಸಂತ ಪ್ರಭುರಾಜ, ಕೃಷಿ ಇಲಾಖೆಯ ಅಧಿಕಾರಿ ಪೃಥ್ವಿ, ಕಂದಾಯ ಇಲಾಖೆಯ ನಿರೀಕ್ಷಕರಾದ ವರಪ್ರಸಾದ ಅವರು ಇಲಾಖೆಯ ಯೋಜನೆಗಳನ್ನು ತಿಳಿಸಿದರು. 
                 
                     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap