ಕಿಸಾನ್ ಸಮ್ಮಾನ್ ಯೋಜನೆ ನಿಲ್ಲಿಸಲಾಗಿದೆ : ಸಿದ್ದರಾಮಯ್ಯ

ಬೆಂಗಳೂರು:

    ವಿಧಾನಸಭಾ ಅಧಿವೇಶನದಲ್ಲಿ ಮಂಗಳವಾರ ಬಿಜೆಪಿ ಶಾಸಕ ಸುರೇಶ್ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಕಿಸಾನ್ ಸಮ್ಮಾನ್ ಯೋಜನೆಯಡಿ 51 ಲಕ್ಷ ರೈತರಿಗೆ ಮಾತ್ರ ಅನುಕೂಲವಾಗುತ್ತದೆ. ಎಲ್ಲಾ ರೈತರಿಗೂ ಈ ಯೋಜನೆ ಲಾಭ ಸಿಗುತ್ತಿಲ್ಲ ಎಂದು ಪ್ರತಿಪಾದಿಸಿದರು. ರಾಜ್ಯದಲ್ಲಿ 87 ಲಕ್ಷ ಕುಟುಂಬಗಳಿವೆ, ಆದರೆ ಎಲ್ಲರಿಗೂ ಉಪಯೋಗವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

    ಹಿಂದಿನ ಬಿಜೆಪಿ ಸರ್ಕಾರ ನಿಲ್ಲಿಸಿದ್ದ ಕೃಷಿ ಭಾಗ್ಯ ಯೋಜನೆ ಮತ್ತೆ ಜಾರಿ ಮಾಡಲಾಗಿದ್ದು, ಸಹಕಾರ ಸಂಘದ ಮೂಲಕ ರೈತರಿಗೆ ಶೂನ್ಯ ಬಡ್ಡಿ ದರದ ಸಾಲವನ್ನು 5 ಲಕ್ಷ ರೂಗೆ ಹೆಚ್ಚಿಸಲಾಗಿದೆ, 45,000-50,000 ಕೋಟಿ ರೂ. ವಾರ್ಷಿಕ ವೆಚ್ಚದ ಗ್ಯಾರಂಟಿ ಯೋಜನೆಗಳ ಲಾಭ ರೈತರಿಗೆ ಸಿಗುತ್ತಿದೆ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link