ಬೆಂಗಳೂರು
ಕುಡಿದ ಅಮಲಿನಲ್ಲಿದ್ದ ಪತಿ ಜಗಳ ತೆಗೆದು ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ದುರ್ಘಟನೆ ನಗರದ ಹೊರವಲಯದ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆನೇಕಲ್‍ನ ಸೀತನಾಯಕನಹಳ್ಳಿಯ ವೆಳ್ಳಿ(25)ಎಂದು ಕೊಲೆಯಾದವರನ್ನು ಗುರುತಿಸಲಾಗಿದೆ,ಕೊಲೆ ಕೃತ್ಯವೆಸಗಿ ಪರಾರಿಯಾಗಿರುವ ಪತಿ ರಾಜು ಬಂಧನಕ್ಕೆ ಜಿಗಣಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.ತಮಿಳುನಾಡಿನ ತಿರುಪ್ಪತೂರು ಮೂಲದ ರಾಜು ಮತ್ತು ವೆಳ್ಳಿ ದಂಪತಿ ಕಳೆದ ಮೂರು ನಾಲ್ಕು ವರ್ಷಗಳಿಂದ ಗಾರೆ ಕೆಲಸ ಮಾಡಿಕೊಂಡು ಸೀತನಾಯಕನಹಳ್ಳಿಯ ವಾಸಿಸುತ್ತಿದ್ದರು.
ಪ್ರತಿ ದಿನ ಆರೋಪಿ ರಾಜು ಕುಡಿದು ಬರುತ್ತಿದ್ದರಿಂದ ಮನೆಯಲ್ಲಿ ಸಣ್ಣಪುಟ್ಟ ವಿಚಾರಗಳಿಗೂ ಆಗಾಗ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಗಾರೆ ಮೇಸ್ತ್ರಿ ಹೇಳಿದ್ದಾರೆ.ಕೆಲಸ ಮುಗಿಸಿಕೊಂಡು ಸೋಮವಾರ ರಾತ್ರಿ ಕಂಠಪೂರ್ತಿ ಕುಡಿದು ಬಂದು ರಾಜು ಪತ್ನಿ ಜೊತೆ ಗಲಾಟೆ ಮಾಡಿದ್ದು ಜಗಳ ವಿಕೋಪಕ್ಕೆ ಹೋದಾಗ ದೊಣ್ಣೆಯಿಂದ ವೆಳ್ಳಿಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಜಿಗಣಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲು ಮಾಡಿಕೊಂಡು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








