ಕುಣಿಗಲ್ :
ಪರಿಸರವನ್ನು ಸ್ವಚ್ಛವಾಗಿಟ್ಟು ಕೊಳ್ಳುವ ಮೂಲಕ ಬೆಟ್ಟ ಗುಡ್ಡಗಳನ್ನು ಸ್ವಚ್ಛತೆಯಿಂದ ಕಾಪಾಡಿಕೊಂಡು ಸಂರಕ್ಷಿಸಿ ಅಭಿವೃದ್ಧಿಪಡಿಸಲು ಮುಂದಾಗಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಂಶಿಕೃಷ್ಣ ಕರೆನೀಡಿದರು.
ತಾಲೂಕಿನ ಐತಿಹಾಸಿಕ ಪ್ರಸಿದ್ದ ಹುತ್ರಿದುರ್ಗ ಬೆಟ್ಟದಲ್ಲಿ ಆಯೋಜಿಸಿದ್ದ ಪೊಲೀಸ್ ಫಿಟ್ನೆಸ್ ಹಾಗೂ ಚೈತನ್ಯ ಹೆಚ್ಚಿಸುವ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾಧಿಕಾರಿಗಳೊಂದಿಗೆ ಟ್ರಕ್ಕಿಂಗ್ ಕಾರ್ಯಕ್ರಮದಲ್ಲಿ ಮಾತನಾಡಿ, ಸಾರ್ವಜನಿಕರು ಬೆಟ್ಟ-ಗುಡ್ಡ ಪರಿಸರವನ್ನು ಸ್ವಚ್ಛ ಮಾಡುವ ಮೂಲಕ ಕಸ-ಕಡ್ಡಿ ಗಿಡಗಂಟೆಗಳನ್ನು ತೆಗೆಯುವ ಮೂಲಕ ಸ್ವಚ್ಛತೆಯಿಂದ ಕಾಪಾಡಬೇಕು. ಪರಿಸರದಿಂದ ಮಾನವನಿಗೆ ಅನೇಕ ರೀತಿಯ ಅನುಕೂಲಗಳು ಲಭ್ಯವಾಗುತ್ತದೆ ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡುವುದರಿಂದ ಸಾರ್ವಜನಿಕರು ಪರಿಸರ ಕಾಪಾಡಿಕೊಳ್ಳುವ ಮೂಲಕ ಹೆಚ್ಚು ಹೆಚ್ಚು ಮಳೆ ಬರುವಂತಾಗಿ ಆರೋಗ್ಯವು ವೃದ್ಧಿಯಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಡಿಷನಲ್ ಎಸ್ಪಿ ಉದೇಶ್, ಪ್ರೊಬೆಷನರಿ ಎಸ್ಪಿ ಕನಿಕ ಸಾ ಗರ್ವಾಲ್ ಹಾಗೂ ಡಿವೈಎಸ್ಪಿ ಜಗದೀಶ್ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
