ಅಬುಧಾಬಿ:
ಕುವೈತ್ ಮಂಗಾಫ್‌ನಲ್ಲಿ ಬೆಂಕಿ ಅವಘಡದಲ್ಲಿ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆ(IAF) ವಿಮಾನ ಇಂದು ಶುಕ್ರವಾರ ಬೆಳಗ್ಗೆ 8:30ಕ್ಕೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.
ಭಾರತೀಯ ವಾಯುಪಡೆಯ ವಿಶೇಷ ವಿಮಾನ ಸಿ-130ಜೆ ಶುಕ್ರವಾರ ಮುಂಜಾನೆ ಕೊಚ್ಚಿಗೆ ಪ್ರಯಾಣ ಬೆಳೆಸಿದೆ. ನಿನ್ನೆ ಗುರುವಾರ ಕುವೈತ್‌ಗೆ ಆಗಮಿಸಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಕುವೈತ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಶೀಘ್ರವೇ ಮೃತದೇಹಗಳನ್ನು ತವರೂರಿಗೆ ಕರೆತರಲು ಕ್ರಮ ಕೈಗೊಂಡಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
45 ಮಂದಿ ಮೃತರಲ್ಲಿ 31 ಮೃತದೇಹಗಳನ್ನು ಕೊಚ್ಚಿ ವಿಮಾನ ನಿಲ್ದಾಣಕ್ಕೆ ತರಲಾಗುತ್ತಿದೆ. ನಂತರ ವಿಮಾನವು ಉಳಿದ ಮೃತದೇಹಗಳನ್ನು ಹೊತ್ತು ದೆಹಲಿಗೆ ತೆರಳಲಿದೆ ಎಂದು ತಿಳಿದುಬಂದಿದೆ. ತಮಿಳುನಾಡಿನಿಂದ ಏಳು ಮಂದಿ ಮತ್ತು ಕರ್ನಾಟಕದ ಒಬ್ಬರ ಮೃತದೇಹಗಳನ್ನು ಕೊಚ್ಚಿಗೆ ತರಲಾಗುತ್ತಿದೆ.
ದಕ್ಷಿಣ ಭಾರತೀಯರಲ್ಲದೆ, ಉತ್ತರ ಪ್ರದೇಶದ ಮೂವರು, ಒಡಿಶಾದ ಇಬ್ಬರು ಮತ್ತು ಬಿಹಾರ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಹರಿಯಾಣದಿಂದ ತಲಾ ಒಬ್ಬರು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದು, ಅವರ ಮೃತದೇಹಗಳನ್ನು ದೆಹಲಿ ವಿಮಾನ ನಿಲ್ದಾಣಕ್ಕೆ ಕೊಂಡೊಯ್ಯಲಾಗುತ್ತಿದೆ. ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಲುಲು ಗ್ರೂಪ್ ನಿಂದ ತಲಾ 5 ಲಕ್ಷ ರೂ. ಪರಿಹಾರ
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಚಿವರು ವಿಮಾನ ನಿಲ್ದಾಣದಲ್ಲಿ ಮೃತರಿಗೆ ಗೌರವ ಸಲ್ಲಿಸಲಿದ್ದಾರೆ. ನಂತರ ಮೃತದೇಹಗಳನ್ನು ಅವರವರ ಮನೆಗೆ ಸಾಗಿಸಲು ರಾಜ್ಯ ಸರ್ಕಾರ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ