ಬೆಂಗಳೂರು
ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿಯನ್ನು ಸಚಿವ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಪುನರ್ ರಚಿಸಲಾಗಿದೆ.
ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರ, ಯಾದಗೀರ, ಕಲಬುರಗಿ ಜಿಲ್ಲೆಯ ಸಚಿವರು, ವಿಧಾನಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧಿಕಾರಿಗಳು, ಕೃಷಿ ಅಧಿಕಾರಿಗಳು ಸೇರಿ 53 ಜನ ವಿಶೇಷ ಆಹ್ವಾನಿತ ಸದಸ್ಯರಾಗಿ, ಕೆಬಿಜೆಎನ್‍ಎಲ್ ವ್ಯವಸ್ಥಾಪಕ ನಿರ್ದೇಶಕರು, ವಿವಿಧ ವಲಯದ ಮುಖ್ಯ ಎಂಜಿನಿಯರ್‍ಗಳು, ಕಾಡಾ ಆಡಳಿತಾಧಿಕಾರಿಗಳು ಸೇರಿ 7 ಜನ ಅಧಿಕಾರಿ ಸದಸ್ಯರನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ