ನವದೆಹಲಿ:
ಉತ್ತರ ಪ್ರದೇಶದ ಮಥುರಾದ ಕೃಷ್ಣ ಜನ್ಮಭೂಮಿಯ ಬಳಿ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲು ರೈಲ್ವೆ ಅಧಿಕಾರಿಗಳು ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದ್ದು ಯಥಾಸ್ಥಿತಿಗೆ ಆದೇಶಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್, ಸಂಜಯ್ ಕುಮಾರ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಈ ಪ್ರಕರಣದಲ್ಲಿ ಕೇಂದ್ರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. “10 ದಿನಗಳ ಅವಧಿಗೆ ವಿಷಯ ಆವರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಇರಲಿ. ಒಂದು ವಾರದ ನಂತರ ಪ್ರಕರಣದ ವಿಚಾರಣೆಯನ್ನು ಪಟ್ಟಿ ಮಾಡಲಾಗುತ್ತದೆ” ಎಂದು ಪೀಠ ಹೇಳಿದೆ.