ಕೇಂದ್ರದಿಂದ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯಗಳು ದುರ್ಬಳಕೆಯಾಗಿಲ್ಲ

ಬೆಂಗಳೂರು:

             ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕೇಂದ್ರ ಸರ್ಕಾರ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

             ವಿಧಾನಸೌಧದದಲ್ಲಿ ನಡೆದ 28 ನೇ ದಕ್ಷಿಣ ವಲಯ ಪರಿಷತ್ ಸಭೆಯಲ್ಲಿ ಭಾಗವಹಿಸಿದ್ದ ಅವರು ಸುದ್ದಿಗಾರರ ಜತೆ ಮಾತನಾಡಿ, ಐಟಿ ಹಾಗೂ ಇಡಿ ಸಂಸ್ಥೆಗಳು ಸ್ವಾಯತ್ತವಾಗಿವೆ. ಅವುಗಳು ಕಾನೂನಿನ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದರು.

              ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸರ್ಕಾರ ತನ್ನ ಸಂಸ್ಥೆಗಳನ್ನು ಬಳಸುತ್ತಿದೆ ಎಂಬುದು ರಾಜಕೀಯ ಪ್ರೇರಿತ ಆರೋಪಗಳಾಗಿವೆ ಎಂದರು.

             ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಯರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಒಂದು ದೇಶಕ್ಕೆ ತನ್ನ ದೇಶದವರು ಯಾರು? ತನ್ನ ದೇಶದಲ್ಲಿ ನೆಲೆಸಿರುವ ವಿದೇಶಿಯರು ಯಾರು ? ಎನ್ನುವುದು ಚೆನ್ನಾಗಿ ಗೊತ್ತಿರಬೇಕು. ಆ ದೃಷ್ಟಿಯಿಂದ ಅಕ್ರಮ ವಲಸಿಗರನ್ನು ಪತ್ತೆ ಹಚ್ಚುವುದು ಅನಿವಾರ್ಯ ಆಗಿದೆ ಎಂದರು.

            ಕಾನೂನು ಪಾಲನೆ ಆಯಾ ರಾಜ್ಯಗಳ ಕರ್ತವ್ಯ. ಬಾಲಕಿಯರು, ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ಎಲ್ಲಾ ರೀತಿಯ ಹಿಂಸಾಚಾರಗಳನ್ನು ನಿರ್ಮೂಲನ ಮಾಡುವುದು ಆಯಾ ಸರ್ಕಾರಗಳ ಆದ್ಯತೆ ಆಗಬೇಕು ಎಂದರು.

             ಜಲಪ್ರಳಯದಿಂದ ತತ್ತರಿಸಿರುವ ಕೊಡಗಿನ ಪುನರ್ ನಿರ್ಮಾಣಕ್ಕಾಗಿ ಕರ್ನಾಟಕಕ್ಕೆ ಎಲ್ಲಾ ರೀತಿಯ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಕೇಂದ್ರ ಸರ್ಕಾರ ಕಳುಹಿಸಿದ ಅಧ್ಯಯನ ತಂಡ ಸಮೀಕ್ಷೆ ನಡೆಸಿದ್ದು ವರದಿ ನೀಡಿದ ನಂತರ ಪರಿಹಾರದ ಮೊತ್ತ ನಿಗದಿ ಮಾಡಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link