ಕೇಂದ್ರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ.

ಕಾರಾಗೃಹದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ.

ಬೆಂಗಳೂರು : ಕಾರಾಗೃಹಗಳಲ್ಲಿ ನಡೆಯುವ ಯಾವುದೇ ಅಕ್ರಮ ಚಟುವಟಿಕೆಗಳನ್ನು ಸಹಿಸುವುದಿಲ್ಲ ಹಾಗೂ ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಚ್ಚರಿಕೆ ನೀಡಿದ್ದಾರೆ.

ನಗದರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಧಿಡೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದರು.

ಭೇಟಿಯ ಸಂದರ್ಭದಲ್ಲಿ, ಕಾರಾಗೃಹದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆ ಸಮಾಲೋಚನೆ ನಡೆಸಿ, ಜೈಲಿನ ಒಳಗೆ ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳು, ರಕ್ಷಣಾ ವ್ಯವಸ್ಥೆ, ವೈದ್ಯಕೀಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದೇನೆ ಎಂದರು.

ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯ ಆರೋಪಿಗಳು ಜೈಲಿನಿನಲ್ಲಿ ಮೊಬೈಲ್ ಫೆÇೀನ್ ಬಳಕೆ ಬಗ್ಗೆ ಗಂಭೀರವಾದ ತನಿಖೆ ನಡೆಯುತ್ತಿದ್ದು, ಇದುವರೆಗೆ ಒಬ್ಬನನ್ನು ಬಂಧಿಸಲಾಗಿದೆ, ಎಂದರು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ದಲ್ಲಿ ನಡೆದ ಅಕ್ರಮ ಚಟುವಟಿಕೆಗಳ ಬಗ್ಗೆ ಮುರುಗನ್ ಸಮಿತಿ ನೀಡಿದ ಶಿಫಾರಸು ಗಳನ್ನು ಅನುಷ್ಠಾನಗೊಳಿಸಿ ಹಲವಾರು ಅಧಿಕಾರಿಗಳನ್ನು ಜೈಲಿನಿಂದ ವರ್ಗಾವಣೆ ಮಾಡಲಾಗಿದೆ. ಕೆಲವು ಅಧಿಕಾರಿಗಳ ಸೇವೆಯನ್ನು ಅಮಾನತ್ತಿನಲ್ಲಿಡಲು ಸಹ ಶಿಫಾರಸು ಮಾಡಲಾಗಿದೆ. ಕೇಂದ್ರ ಕಾರಾಗೃಹಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೊಬೈಲ್ ಜಾಮರ್ ಗಳನ್ನು ಅಳವಡಿಸಲು ನಿರ್ಧರಿಸಲಾಗಿದ್ದು 5-ಜಿ ಸಾಮಥ್ರ್ಯದವರೆಗಿನ ಮೊಬೈಲ್ ಕರೆಗಳನ್ನು ನಿಷ್ಕ್ರಿಯ ಗೊಳಿಸುವಂತೆ ಕ್ರಮ ಕೈಗೊಳ್ಳಲಾಗುವುದು, ಎಂದರು.

ಜೈಲಿನ ಒಳಗಡೆ ಅಕ್ರಮವಾಗಿ, ಮಾದಕ ವಸ್ತುಗಳ ಪೂರೈಕೆ ಕಾನೂನು ಬಾಹಿರವಾಗಿ ಕೈದಿಗಳಿಗೆ ವಿಶೇಷ ಸವಲತ್ತುಗಳನ್ನು ನೀಡುವುದು ಹಾಗೂ ಮೊಬೈಲ್ ಬಳಕೆಯಂಥ ಅಕ್ರಮ ಚಟುವಟಿಕೆಗಳಿಗೆ ಅಂಕುಶ ಹಾಕಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇತ್ತೀಚೆಗೆ, ಜೈಲಿನೊಳಗೆ ಫುಟ್ ಬಾಲ್ ನಲ್ಲಿ, ಮಾದಕ ವಸ್ತುಗಳನ್ನು ತುಂಬಿಸಿ, ಜೈಲಿನೊಳಕ್ಕೆ ಎಸೆದ ಘಟನೆ ಬಗ್ಗೆ, ತನಿಖೆ ನಡೆಸಲಾಗುತ್ತಿದೆ, ಎಂದು ಅಧಿಕಾರಿಗಳು, ಸಚಿವರಿಗೆ ಮಾಹಿತಿ ನೀಡಿದರು.

ಜೈಲಿಗೆ ಕರೆತರಲಾದ ವ್ಯಕ್ತಿಯೊಬ್ಬ ಕಾಲಿಗೆ ಬ್ಯಾಂಡೇಜ್ ಜೊತೆ ಕಟ್ಟಿಕೊಂಡಿದ್ದ ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಈ ಸಂಬಂಧ ಇಬ್ಬರು ಪೆÇಲೀಸ್ ಸಿಬ್ಬಂದಿಯನ್ನೂ ಬಂಧಿಸಲಾಗಿದೆ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ದಲ್ಲಿ ಕೈದಿಗಳ ಭೇಟಿಗೆ ಬರುವ ಕುಟುಂಬ ಸದಸ್ಯರ ಹಾಗೂ ಇತರರಿಂದ, ಅಕ್ರಮವಾಗಿ ಹಣ ವಸೂಲಿ ಆಗುತ್ತಿದೆ ಎಂಬ ಬಗ್ಗಯೂ ಪ್ರಸ್ತಾಪಿಸಲಾಗಿದೆ ಹಾಗೂ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ರಾಜ್ಯ ಕಾರಾಗೃಹಗಳ ಮುಖ್ಯಸ್ಥ, ಅಲೋಕ್ ಮೋಹನ್, ಕೇಂದ್ರ ಕಾರಾಗೃಹದ ಮುಖ್ಯಸ್ಥ ರಮೇಶ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link
Powered by Social Snap