ಹಾವೇರಿ
ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರಾದ ಐ.ಆರ್.ಎಸ್. ಅಧಿಕಾರಿ ಹಸನ್ ಅಹ್ಮದ್ ಅವರು ಗುರುವಾರ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್‍ಗಳಿಗೆ ಭೇಟಿ ನೀಡಿ ಸಿಬ್ಬಂದಿಗಳ ಕಾರ್ಯನಿರ್ವಹಣೆ ಕುರಿತಂತೆ ಪರಿಶೀಲನೆ ನಡೆಸಿದರು.ಚೆಕ್ ಪೋಸ್ಟ್‍ಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯನಿರ್ವಹಣೆಯ ಹಂಚಿಕೆಯ ವಿವರ, ಚೆಕ್ ಪೋಸ್ಟ್‍ಗಳ ಮೂಲಭೂತ ಸೌಕರ್ಯ, ಪ್ರಮುಖ ದೂರವಾಣಿ ಸಂಪರ್ಕ ಸಂಖ್ಯೆಗಳ ಪ್ರದರ್ಶನ, ವಾಹನ ತಪಾಸಣೆಗೆ ಅನುಸರಿಸುವ ಕ್ರಮಗಳು ಹಾಗೂ ಚೆಕ್ ಪೋಸ್ಟ್ ಸಿಬ್ಬಂದಿಗಳಿಗೆ ಮೂಲ ಭೂತ ಸೌಕರ್ಯಗಳು ಹಾಗೂ ರಕ್ಷಣಾ ಸಿಬ್ಬಂದಿಗಳ ನಿಯೋಜನೆ ಕುರಿತಂತೆ ಮಾಹಿತಿ ಪಡೆದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
