ನವದೆಹಲಿ:
ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚುವರಿಯಾಗಿ ಶೇ. 2ರಷ್ಟು ಏರಿಕೆ ಮಾಡಲು ಬುಧವಾರ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ತುಟ್ಟಿಭತ್ಯೆ ನೀಡಲು ಒಪ್ಪಿಗೆ ಸೂಚಿಸಿದೆ.ಕೇಂದ್ರ ಸರ್ಕಾರಿ ನೌಕರರರು ಸದ್ಯ ಶೇ.7ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದು, ಅದನ್ನು ಈಗ ಶೇ.9ಕ್ಕೆ ಏರಿಕೆ ಮಾಡಲಾಗಿದೆ.ಜುಲೈ 1, 2018ರಿಂದಲೇ ಪೂರ್ವಾನ್ವಯವಾಗುವಂತೆ ಮೂಲವೇತನ ಮೇಲೆ ಶೆೇ.2ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದರಿಂದ 1.1 ಕೋಟಿ ಕೇಂದ್ರ ಸರ್ಕಾರಿ ನೌಕರಿಗೆ ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ